ಸಿರ್ಸಿ ವೃತ್ತದಿಂದ ವಿಜಯನಗರ ಪೈಪ್‍ಲೈನ್‍ವರೆಗೆ ರಸ್ತೆ ಅಗಲೀಕರಣ

ಬೆಂಗಳೂರು,ಡಿ.5- ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿ ಪಾದರಾಯನಪುರ ರಸ್ತೆ ಅಗಲೀಕರಣದ ಕಾಮಗಾರಿಯನ್ನು ಶೀಘ್ರವೇ ಮುಗಿಸಿ ಸಾರ್ವಜನಿಕ ಸೇವೆಗೆ ಲೋಕಾರ್ಪಣೆ ಮಾಡಲಿದ್ದೇವೆ ಎಂದು ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಸ್ತೆ ಅಗಲೀಕರಣದ ಸಂಬಂಧ ಸ್ಥಳೀಯ ಶಾಸಕರಾಗಿರುವ ಜಮ್ಮೀರ್ ಅಹಮ್ಮದ್ ಹಾಗೂ ಪಾಲಿಕೆಯ ಅಧಿಕಾರಿಗಳ ಜೊತೆ ಮಾತುಕತೆ ನಡೆಸಲಾಗಿದೆ. ಕೆಲವು ಸಣ್ಣಪುಟ್ಟ ಸಮಸ್ಯೆಗಳಿದ್ದವು, ಈಗ ಎಲ್ಲವೂ ಬಗೆಹರಿಯಲಿದ್ದು, ಶೀಘ್ರವಾಗಿ ಕಾಮಗಾರಿ ಮುಗಿಸಿ ಸಾರ್ವಜನಿಕ ಸೇವೆಗೆ ಲೋಕರ್ಪಾಣೆಗೊಳಿಸಲಾಗುವುದು ಎಂದರು. ಒಂದಿಲ್ಲೊಂದು ಕಾರಣದಿಂದ ಮುಂದೂಡಲೇ ಬಂದಿತು. […]