ನಿವೃತ್ತ ಯೋಧ ಶಿವಾನಂದ ಪಾಟೀಲ್ ಜೆಡಿಎಸ್‍ಗೆ ಸೇರ್ಪಡೆ

ಬೆಂಗಳೂರು, ಫೆ.15- ವಿಜಯಪುರ ಜಿಲ್ಲಾಯ ಸಿಂದಗಿ ವಿಧಾನಸಭೆ ಕ್ಷೇತ್ರದ ಪ್ರಭಾವಿ ಮುಖಂಡ ಹಾಗೂ ನಿವೃತ್ತ ಯೋಧ ಶಿವಾನಂದ ಪಾಟೀಲ್ ಅವರು ತಮ್ಮ ನೂರಾರು ಬೆಂಬಲಿಗರ ಜತೆಯಲ್ಲಿ ಇಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದರು. ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಶಿವಾನಂದ ಪಾಟೀಲ್ ಅವರಿಗೆ ಪಕ್ಷದ ಶಾಲು ಹೊದಿಸಿ ಪಕ್ಷದ ಧ್ವಜವನ್ನು ನೀಡುವ ಮೂಲಕ ಪಕ್ಷಕ್ಕೆ ಬರಮಾಡಿಕೊಂಡರು. ಅವರ ಜತೆಯಲ್ಲಿ ಆ ಕ್ಷೇತ್ರದ ನೂರಾರು ಕಾರ್ಯಕರ್ತರು ಕೂಡ ಪಕ್ಷಕ್ಕೆ ಸೇರ್ಪಡೆಯಾದರು. ನಂತರ ಮಾತನಾಡಿದ […]