ರಾಜ್ಯದಲ್ಲಿ ಮಳೆ ಅಬ್ಬರಕ್ಕೆ ಇಬ್ಬರು ಮಕ್ಕಳು ಸೇರಿದಂತೆ 6 ಮಂದಿ ಸಾವು

ಬೆಂಗಳೂರು, ಆ.2- ರಾಜ್ಯದಲ್ಲಿ ಮತ್ತೆ ಮಳೆಯ ಅಬ್ಬರ ಮುಂದುವರೆದಿದ್ದು, ಜನಜೀವನ ತತ್ತರಗೊಂಡಿದೆ.ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಹ್ಮಣ್ಯ, ಕುಮಾರಧಾರಾ ಸಮೀಪದ ಪರ್ವತಮುಖಿಯಲ್ಲಿ ನಿನ್ನೆ ರಾತ್ರಿ ಗುಡ್ಡಕುಸಿದು ಇಬ್ಬರು ಮಕ್ಕಳು ಮೃತಪಟ್ಟರೆ, ಉತ್ತರ ಕನ್ನಡ ಜಿಲ್ಲೆ, ಭಟ್ಕಳದ ಮುಟ್ಟಳ್ಳಿ ಗ್ರಾಮದಲ್ಲಿ ಮನೆ ಮೇಲೆ ಗುಡ್ಡಕುಸಿದು ನಾಲ್ವರು ಸಾವನ್ನಪ್ಪಿದ್ದಾರೆ. ಕಲಬುರಗಿಯಲ್ಲಿ ಬೈಕ್ ಸವಾರನೊಬ್ಬ ನೀರಿನಲ್ಲಿ ಕೊಚ್ಚಿಹೋಗಿದ್ದಾನೆ. ದಕ್ಷಿಣ ಕನ್ನಡ ಜಿಲ್ಲೆ, ಉಡುಪಿ, ಹಾವೇರಿ, ಬಳ್ಳಾರಿ, ದಾವಣಗೆರೆ, ತುಮಕೂರು, ರಾಯಚೂರು, ಉತ್ತರ ಕನ್ನಡ, ಕೊಪ್ಪಳ, ಕೋಲಾರ, ವಿಜಯನಗರ, ಮೈಸೂರು, ಕರಾವಳಿ, ಮಂಡ್ಯ, ರಾಮನಗರ, […]