ಶಿಕ್ಷಕಿ ಮೇಲೆ ಗುಂಡು ಹರಿಸಿದ 6 ವರ್ಷದ ವಿದ್ಯಾರ್ಥಿ

ವಾಷಿಂಗ್ಟನ್, ಜ.7- ಪ್ರಾಥಾಮಿಕ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಆರು ವರ್ಷದ ವಿದ್ಯಾರ್ಥಿಯೊಬ್ಬ ಗುಂಡು ಹಾರಿಸಿರುವ ಘಟನೆಯಲ್ಲಿ ಶಿಕ್ಷಕಿಯೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಅಮೆರಿಕದ ವರ್ಜೀನಿಯಾದಲ್ಲಿ ನಡೆದಿದೆ ಎಂದು ವರದಿಯಾಗಿದೆ. ರಿಚ್ನೆಕ್ ಎಲಿಮೆಂಟರಿ ಶಾಲೆಯಲ್ಲಿ ಈ ಘಟನೆ ನಡೆದಿದ್ದು, ದಾಳಿಯಲ್ಲಿ ಇತರ ಯಾವುದೇ ವಿದ್ಯಾರ್ಥಿಗಳು ಗಾಯಗೊಂಡಿಲ್ಲ ಎಂದು ತಿಳಿದುಬಂದಿದೆ. ಗುಂಡು ಹಾರಿಸಿರುವ ಬಾಲಕನನ್ನು ಪೊಲೀಸ್ ಕಸ್ಟಡಿಗೆ ಪಡೆದುಕೊಂಡು ವಿಚಾರಣೆ ನಡೆಸಲಾಗುತ್ತಿದೆ ಎಂದು ಸ್ಥಳೀಯ ಪೊಲೀಸ್ ಮುಖ್ಯಸ್ಥ ಸ್ಟೀವ್ ಡ್ರೋ ಸುದ್ದಿಗೋಷ್ಠಿಯಲ್ಲಿ ವಿವರಣೆ ನೀಡಿದ್ದಾರೆ. ವಿದ್ಯಾರ್ಥಿ ಆಕಸ್ಮಿಕವಾಗಿ ಗುಂಡು ಹಾರಿಸಿಲ್ಲ […]