ಕಳಚಿತು ಕನ್ನಡ ಚಿತ್ರರಂಗದ ಮತ್ತೊಂದು ಕೊಂಡಿ, ಎಸ್.ಕೆ.ಭಗವಾನ್ ಇನ್ನಿಲ್ಲ

ಬೆಂಗಳೂರು,ಫೆ.20 – ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ಮತ್ತು ನಿರ್ಮಾಪಕರಾದ ಎಸ್.ಕೆ.ಭಗವಾನ್(90)ಅವರು ಇಂದು ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಇಂದು ಬೆಳಗ್ಗೆ 6 ಗಂಟೆಗೆ ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಮೃತರು ಮೂವರು ಗಂಡು ಮಕ್ಕಳು, ಒಬ್ಬ ಪುತ್ರಿ ಹಾಗೂ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ. ಕಳೆದ 2009ರಲ್ಲಿ ಅವರ ಪತ್ನಿ ನಿಧನರಾಗಿದ್ದರು. ಲವಲವಿಕೆಯಿಂದಲೇ ಇದ್ದ ಭಗವಾನ್ ಅವರಿಗೆ ಕಳೆದ ಶುಕ್ರವಾರ ಹೃದಯಘಾತವಾಗಿ ಆಸ್ಪತ್ರೆಗೆ ಸೇರಿದ್ದರು. ಅವರ ಆಸೆಯಂತೆ ಅವರ ನೇತ್ರಗಳನ್ನು ನಾರಾಯಣ ನೇತ್ರಾಲಯಕ್ಕೆ ದಾನ […]