ಚರ್ಮಗಂಟು ರೋಗ : ಮೃತ ಜಾನುವಾರುಗಳ ಮಾಲೀಕರಿಗೆ ಪರಿಹಾರ ನೀಡಲು 30 ಕೋಟಿ ಬಿಡುಗಡೆ

ಬೆಂಗಳೂರು,ಡಿ.13- ಚರ್ಮಗಂಟು ರೋಗದಿಂದ ಜಾನುವಾರುಗಳು ಮೃತಪಟ್ಟ ಪ್ರಕರಣದಲ್ಲಿ ಮಾಲೀಕರಿಗೆ ಪರಿಹಾರ ನೀಡಲು 30 ಕೋಟಿ ರೂ.ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಪಶು ಸಂಗೋಪನೆ ಸಚಿವ ಪ್ರಭು ಬಿ.ಚವ್ಹಾಣ್ ತಿಳಿಸಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿರುವ ಅವರು, ಚರ್ಮಗಂಟು ರೋಗದಿಂದ ಬಳಲಿ ಮೃತಪಟ್ಟ ಜಾನುವಾರುಗಳ ಮಾಲೀಕರು ಮತ್ತು ರೈತರ ಆರ್ಥಿಕ ನಷ್ಟವನ್ನು ತಪ್ಪಿಸಲು ಮೃತ ರಾಸುಗಳಿಗೆ ಪರಿಹಾರ ನೀಡಲು 30 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ. ಈ ಹಿಂದೆ 7 ಕೋಟಿ ರೂ. ಪರಿಹಾರ […]