ಶಾಸಕರಾದ ಎ.ಟಿ.ರಾಮಸ್ವಾಮಿ, ಶಿವಲಿಂಗೇಗೌಡಗೆ ಜೆಡಿಎಸ್ ಟಿಕೆಟ್ ಡೌಟ್

ಬೆಂಗಳೂರು,ಫೆ.5- ಪಕ್ಷದಿಂದ ಅಂತರ ಕಾಯ್ದುಕೊಂಡಿದ್ದ ಜೆಡಿಎಸ್‍ನ ಮತ್ತಿಬ್ಬರು ಶಾಸಕರಿಗೆ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ಇಲ್ಲ. ಜೆಡಿಎಸ್ ಶಾಸಕರಾದ ಗುಬ್ಬಿಯ ಶ್ರೀನಿವಾಸ್, ಕೋಲಾರದ ಶ್ರೀನಿವಾಸ್ ಗೌಡ ಅವರಿಗೆ ಟಿಕೆಟ್ ನಿರಾಕರಿಸಲಾಗಿತ್ತು. ಅರಕಲಗೂಡು ಶಾಸಕ ಎ.ಟಿ.ರಾಮಸ್ವಾಮಿ ಹಾಗೂ ಅರಸೀಕೆರೆ ಶಾಸಕ ಶಿವಲಿಂಗೇಗೌಡ ಅವರಿಗೂ ಟಿಕೆಟ್ ಕೈ ತಪ್ಪುವುದು ಬಹುತೇಕ ಖಚಿತ. ರಾಜ್ಯಸಭೆ ಚುನಾವಣೆಯಲ್ಲಿ ಪಕ್ಷದ ವಿಪ್ ಉಲ್ಲಂಘಿಸಿದ್ದಾರೆ ಎಂಬ ಆರೋಪದ ಮೇಲೆ ಪಕ್ಷದಿಂದ ಉಚ್ಛಾಟನೆ ಮಾಡಲಾಗಿದ್ದ ಶಾಸಕರಾದ ಶ್ರೀನಿವಾಸ್ ಹಾಗೂ ಶ್ರೀನಿವಾಸ್ ಗೌಡ ಅವರ ಕ್ಷೇತ್ರಗಳಿಗೆ ಬದಲಿ ಅಭ್ಯರ್ಥಿಗಳನ್ನು […]