ರಾಜ್ಯದಲ್ಲಿ ಸ್ಮಾರ್ಟ್ ಸಿಟಿ ಯೋಜನೆ ವೇಗವಾಗಿ ನಡೆಯುತ್ತಿದೆ : ಸಚಿವ ಭೈರತಿ ಬಸವರಾಜ್

ಬೆಂಗಳೂರು,ಜ.24-ರಾಜ್ಯದ ಸ್ಮಾರ್ಟ್ ಸಿಟಿ ಕಾಮಗಾರಿ ದೇಶದಲ್ಲಿಯೇ ಅತ್ಯಂತ ವೇಗವಾಗಿ ನಡೆಯುತ್ತಿದೆ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಹೇಳಿದರು. ರಾಜ್ಯದ 7 ಸ್ಮಾರ್ಟ್ ಸಿಟಿಗಳಾದ ಶಿವಮೊಗ್ಗ, ಮಂಗಳೂರು, ಬೆಂಗಳೂರು, ತುಮಕೂರು, ದಾವಣಗೆರೆ, ಹುಬ್ಬಳ್ಳಿ-ಧಾರವಾಡ ಮತ್ತು ಬೆಳಗಾವಿ ಸ್ಮಾರ್ಟ್ ಸಿಟಿಗಳಲ್ಲಿ ನಡೆದಿರುವ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 2020ರ ಫೆಬ್ರವರಿ ವೇಳೆಗೆ ರೂ.855 ಕೋಟಿ ರೂಪಾಯಿಗಳ ಕಾಮಗಾರಿಗಳು ನಡೆದಿತ್ತು. ಅಲ್ಲಿಂದ ಇಲ್ಲಿಯವರೆಗೆ ರೂ. 2646 ಕೋಟಿ ರೂಪಾಯಿಗಳ ಕಾಮಗಾರಿಗಳು ನಡೆದಿವೆ ಎಂದರು. […]