ಇಬ್ಬರು ಮೊಬೈಲ್ ಸುಲಿಗೆಕೋರರ ಸೆರೆ, 512 ಸ್ಮಾರ್ಟ್ ಫೋನ್ ವಶ
ಬೆಂಗಳೂರು,ಆ.11- ಸರಣಿ ಮೊಬೈಲ್ ಸುಲಿಗೆ ಮಾಡಿ ಹೊರ ರಾಜ್ಯಗಳಿಗೆ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿ, 78.84 ಲಕ್ಷ ರೂ. ಮೌಲ್ಯದ 512 ಸ್ಮಾರ್ಟ್‍ಫೋನ್‍ಗಳನ್ನು ವಶಪಡಿಸಿಕೊಂಡಿದ್ದಾರೆ. ಪಾದರಾಯನಪುರದ ನಿವಾಸಿ ಅಜ್ಮಲ್ ಪಾಷಾ ಮತ್ತು ಶಿವಾಜಿನಗರದ ನಿವಾಸಿ ಇಜಾಜ್ ಬಂಧಿತ ಆರೋಪಿಗಳು. ನಗರದ ವಿವಿಧ ಪೊಲೀಸ್ ಠಾಣೆ ವ್ಯಾಪ್ತಿಗಳಲ್ಲಿ ಮೊಬೈಲ್ ಫೋನ್ ಸುಲಿಗೆ ಪ್ರಕರಣಗಳು ಹೆಚ್ಚಾಗುತ್ತಿದ್ದ ಬಗ್ಗೆ ಗಂಭೀರವಾಗಿ ಪರಿಗಣಿಸಿದ ಪೊಲೀಸರು ಆರೋಪಿಗಳಿಗಾಗಿ ಶೋಧ ಕೈಗೊಂಡು ಇಬ್ಬರನ್ನು ಬಂಧಿಸಿದ್ದಾರೆ. ಈ ಇಬ್ಬರು ಆರೋಪಿಗಳು 7ರಿಂದ 8 ಜನರ […]