ಸ್ಮಾರ್ತ ಬ್ರಾಹ್ಮಣರಿಗೆ ಅಲ್ಪಸಂಖ್ಯಾತ ಸ್ಥಾನ ಮಾನ ಇಲ್ಲ: ಸುಪ್ರೀಂ ಸ್ಪಷ್ಟನೆ

ಹೊಸದಿಲ್ಲಿ, ಅ.17- ಅದ್ವೈತ ಸಿದ್ಧಾಂತ ಪಾಲನೆ ಮಾಡುವ ಸ್ಮಾರ್ತ ಬ್ರಾಹ್ಮಣರಿಗೆ ಅಲ್ಪಸಂಖ್ಯಾತ ಸ್ಥಾನ ಮಾನ ನೀಡಬೇಕು ಎಂದು ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಸುಪ್ರೀಂಕೋರ್ಟ್‍ನ ನ್ಯಾಯಮೂರ್ತಿಗಳಾದ ಕೃಷ್ಣ ಮುರಾರಿ ಮತ್ತು ಎಸ್ ರವೀಂದ್ರ ಭಟ್ ಅವರನ್ನೊಳಗೊಂಡ ಪೀಠವು ಮದ್ರಾಸ್ ಹೈಕೋರ್ಟ್ ಆದೇಶವನ್ನು ಎತ್ತಿಹಿಡಿದಿದೆ. ಸ್ಮಾರ್ತ ಬ್ರಾಹ್ಮಣರು ಧಾರ್ಮಿಕ ಪಂಗಡವಲ್ಲ, ಅವರಿಗೆ ಅಲ್ಪಸಂಖ್ಯಾತ ಸ್ಥಾನಮಾನವನ್ನು ನೀಡಲಾಗುವುದಿಲ್ಲ ಎಂದು ಸ್ಪಷ್ಟ ಪಡಿಸಿದೆ. ಅನೇಕ ಜನರು ಅದ್ವೈತ ತತ್ವವನ್ನು ಅನುಸರಿಸುತ್ತಾರೆ. ಈ ರೀತಿ ಅಲ್ಪಸಂಖ್ಯಾತ ಸ್ಥಾನಮಾನ ನೀಡುತ್ತಾ ಹೋದರೆ, ನಾವು ಅಲ್ಪಸಂಖ್ಯಾತರ […]