ಕಾಶ್ಮೀರದ ಹಿಮಸೌಂದರ್ಯಕ್ಕೆ ಮಾರುಹೋದ ಕಾಂಗ್ರೆಸ್ ನಾಯಕರು

ಶ್ರೀನಗರ,ಜ.30- ಕಾಶ್ಮೀರದಲ್ಲಿ ನಡೆದ ಭಾರತ ಜೋಡೋ ಯಾತ್ರೆ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲು ತೆರಳಿದ್ದ ಕಾಂಗ್ರೆಸ್ ನಾಯಕರು ಹಿಮಸೌಂದರ್ಯಕ್ಕೆ ಮಾರು ಹೋಗಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಮಾಜಿ ಸಚಿವ ಕೆ.ಜೆ.ಜಾರ್ಜ್ ಸೇರಿದಂತೆ ಅನೇಕ ಪ್ರಮುಖ ನಾಯಕರು ಕಣಿವೆ ರಾಜ್ಯದಲ್ಲಿ ಸುರಿಯುತ್ತಿರುವ ಹಿಮಮಳೆಯ ನಡುವೆ ಛತ್ರಿ ಹಿಡಿದು ಸೌಂದರ್ಯವನ್ನು ವರ್ಣನೆ ಮಾಡಿದ್ದಾರೆ. ಕಾಶ್ಮೀರದ ಹಿಮಪಾತ ಹಾಗೂ ಪ್ರಕೃತಿ ಸೌಂದರ್ಯಕ್ಕೆ ಮನಸೋತಿರುವ ಡಿ.ಕೆ. ಶಿವಕುಮಾರ್ ವಿಡಿಯೋ ಮೂಲಕ ತಮ್ಮ ಅನುಭವ ಹಂಚಿಕೊಂಡಿದ್ದಾರೆ. ಭಾರತ ಜೋಡೋ ಯಾತ್ರೆ ಅಂತಿಮ ದಿನ ನಾವೆಲ್ಲ […]