ಪೆನ್‍ಡ್ರೈವ್ ಕಳೆದುಕೊಂಡಿದ್ದ ಟೆಕ್ಕಿಯನ್ನು ಬ್ಲಾಕ್‍ಮೇಲ್ ಮಾಡುತ್ತಿದ್ದ ಆರೋಪಿ ಸೆರೆ

ಬೆಂಗಳೂರು,ಡಿ.24- ಮಹಿಳಾ ಸಾಫ್ಟವೇರ್ ಇಂಜಿನಿಯರ್ ಒಬ್ಬರು ಕಳೆದುಕೊಂಡಿದ್ದ ಪೆನ್‍ಡ್ರೈವ್‍ನಲ್ಲಿದ್ದ ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲಾಕ್ ಮೇಲ್ ಮಾಡಿ ಹಣ ವಸೂಲಿಗೆ ಯತ್ನಿಸಿದ ಆರೋಪಿಯನ್ನು ನಗರದ ಆಗ್ನೇಯ ವಿಭಾಗದ ಸಿಇಎನ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ನಗರದಲ್ಲಿ ಪೈಂಟಿಂಗ್ ಕೆಲಸ ಮಾಡುತ್ತಿದ್ದ ಶೋಯಬ್ ಅಹಮದ್ ಬಂಧಿತ ಆರೋಪಿ. ಬೇಗೂರು ರಸ್ತೆಯಲ್ಲಿ ವಾಸಿಸುತ್ತಿದ್ದ 25 ವರ್ಷದ ಸಾಫ್ಟವೇರ್ ಇಂಜಿನಿಯರ್ ಒಬ್ಬರು ತಮ್ಮ ಪೆನ್‍ಡ್ರೈವ್ ಕಳೆದುಕೊಂಡಿದ್ದರು. ಅದು ಆರೋಪಿ ಶೋಯಬ್‍ಗೆ ಸಿಕ್ಕಿದೆ. ಅದರಲ್ಲಿದ್ದ ಖಾಸಗಿ ಫೋಟೋಗಳು ಮತ್ತು ವಿಡಿಯೋಗಳನ್ನು ಯುವತಿಗೆ ಕಳುಹಿಸಿದ್ದ ಈ […]

ಹೃದಯ ಕಾಯಿಲೆಗೆ ಹೆದರಿ ಟೆಕ್ಕಿ ಆತ್ಮಹತ್ಯೆ

ಬೆಂಗಳೂರು, ಡಿ.21- ಹೃದಯ ಸಂಬಂಧಿ ಕಾಯಿಲೆಯಿಂದ ಖಿನ್ನತೆಗೊಳಗಾಗಿದ್ದ ಸಾಫ್ಟ್ ವೇರ್ ಎಂಜಿನಿಯರ್‍ರೊಬ್ಬರು ತಮ್ಮ ಕಾರಿನೊಳಗೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾಲಕ್ಷ್ಮೀ ಲೇಔಟ್ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಮಹಾಲಕ್ಷ್ಮೀ ಲೇಔಟ್ ನಿವಾಸಿ ವಿಜಯಕುಮಾರ್(51) ಆತ್ಮಹತ್ಯೆ ಮಾಡಿಕೊಂಡಿರುವ ಸಾಫ್ಟ್‍ವೇರ್. ಪ್ರತಿಷ್ಠಿತ ಕಂಪೆನಿಯೊಂದರಲ್ಲಿ ಸಾಫ್ಟ್‍ವೇರ್ ಎಂಜಿನಿಯರ್ ಉದ್ಯೋಗದಲ್ಲಿದ್ದ ವಿಜಯಕುಮಾರ್ ಹೃದಯ ಸಂಬಂಧಿ ಕಾಯಿಲೆಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರೂ ಗುಣಮುಖವಾಗಿರಲಿಲ್ಲ. ಇದರಿಂದ ಅವರು ಖಿನ್ನತೆಗೊಳಗಾಗಿ ಆತ್ಮಹತ್ಯೆಗೆ ನಿರ್ಧರಿಸಿದ್ದಾರೆ. ಕಾರನ್ನು ಸ್ವಚ್ಛತೆ ಮಾಡಿಸಲೆಂದು ಮನೆಯಿಂದ ಮೊನ್ನೆ ಕಾರು ತೆಗೆದುಕೊಂಡು ಹೊರಬಂದ ವಿಜಯಕುಮಾರ್ ಪೈಪ್ ಲೈನ್ […]

ಅಪಾರ್ಟ್ಮೆಂಟ್ ನ 10ನೇ ಮಹಡಿಯಿಂದ ಬಿದ್ದು ಸಾಫ್ಟ್‌ವೇರ್‌ ಉದ್ಯೋಗಿ ಸಾವು

ಬೆಂಗಳೂರು,ಆ.13-ಅಪಾರ್ಟ್ ವೊಂದರ ಹತ್ತನೇ ಮಹಡಿಯಿಂದ ಸಾಫ್ಟ್ವೇರ್ ಕಂಪನಿ ಉದ್ಯೋಗಿ ಆಯತಪ್ಪಿ ಬಿದ್ದು ಮೃತಪಟ್ಟಿರುವ ಘಟನೆ ಬೆಳ್ಳಂದೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬಿಹಾರ ಮೂಲದ ತ್ರಿದೀಪ್(30) ಮೃತಪಟ್ಟ ಸಾಫ್ಟ್ವೇರ್ ಕಂಪನಿ ಉದ್ಯೋಗಿ.ಬೆಳ್ಳಂದೂರಿನ ಗ್ರೀನ್ ಶೋಭಾ ಡೈಸಿ ಅಪಾರ್ಟ್ಮೆಂಟ್ನಲ್ಲಿ ತ್ರಿದೀಪ್ ವಾಸವಾಗಿದ್ದರು. ಇಂದು ಬೆಳಗಿನ ಜಾವ 3 ಗಂಟೆ ಸುಮಾರಿನಲ್ಲಿ ತ್ರಿದೀಪ್ 10ನೇ ಮಹಡಿಯಿದ ಆಯತಪ್ಪಿ ಬಿದ್ದು ಮೃತಪಟ್ಟಿದ್ದಾರೆ. ಸುದ್ದಿ ತಿಳಿದು ಬೆಳ್ಳಂದೂರು ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.