ಸಿಎಂ ಜತೆ ಚರ್ಚಿಸಿ ಹಾಲಿನ ದರ ಏರಿಕೆಗೆ

ಬೆಂಗಳೂರು,ಅ.19- ಗ್ರಾಹಕರಿಗೆ ಮಾರಾಟ ಮಾಡುವ ಹಾಲಿನ ದರ ಪರಿಷ್ಕರಣೆ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಕ್ತ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾಲಿನ ದರ ಹೆಚ್ಚಳ ಮಾಡಬೇಕೆಂಬ ಪ್ರಸ್ತಾವನೆಯಿದೆ. ಆ ಬಗ್ಗೆ ಇನ್ನು ಯಾವುದೇ ತೀರ್ಮಾನ ಆಗಿಲ್ಲ. ಸಿಎಂ ಗಮನಕ್ಕೆ ಈ ವಿಚಾರ ಬಂದಿದ್ದು, ಸೂಕ್ತ ಸಮಯದಲ್ಲಿ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದರು. 14 ಹಾಲು ಉತ್ಪಾದಕ ಸಹಕಾರ ಸಂಘಗಳು ಹಾಲಿನ ದರ ಹೆಚ್ಚಳಕ್ಕೆ ಸರ್ಕಾರಕ್ಕೆ ಮನವಿ ಸಲ್ಲಿಸಿವೆ. ಗ್ರಾಹಕರಿಗೆ […]

ಮೈಸೂರು ದಸರಾಗೆ ಸಿದ್ಧತೆಗಳು ಪೂರ್ಣ: ಸಚಿವ ಸೋಮಶೇಖರ್

ಮೈಸೂರು, ಸೆ.18- ವಿಶ್ವವಿಖ್ಯಾತ ಮೈಸೂರು ದಸರಾಗೆ ಸಿದ್ಧತೆಗಳು ಭರದಿಂದ ಸಾಗಿದ್ದು, ನಾಳೆಯೊಳಗೆ ಅಂತಿಮವಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದರು. ಅರಮನೆ ಆವರಣದಲ್ಲಿಂದು ಮಾವುತರು, ಕಾವಾಡಿಗರ ಕುಟುಂಬವರ್ಗದವರಿಗೆ ಹಮ್ಮಿಕೊಂಡಿದ್ದ ಉಪಹಾರ ಕೂಟದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನಾಳೆ ಅಧಿಕೃತವಾಗಿ ರಾಷ್ಟ್ರಪತಿ ಕಚೇರಿಯಿಂದ ಪೂರ್ಣ ಪ್ರಮಾಣದ ಮಾಹಿತಿ ಬರಲಿದ್ದು, ನಂತರ ಭದ್ರತೆ ಸೇರಿದಂತೆ ವಿವಿಧ ವ್ಯವಸ್ಥೆಗಳ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು. ನಂತರ ಆಹ್ವಾನ ಪತ್ರಿಕೆ ಸಿದ್ಧಪಡಿಸಿ ವಿವಿಧ ಕಾರ್ಯಕ್ರಮಗಳು ಹಾಗೂ ಅತಿಥಿಗಳ ಬಗ್ಗೆ […]