ಶೀಘ್ರದಲ್ಲೇ ವಿಷ್ಣು ಸ್ಮಾರಕ ಲೋಕಾರ್ಪಣೆ

ಬೆಂಗಳೂರು,ನ.27- ಅಭಿಮಾನಿಗಳ ಕೋರಿಕೆಯಂತೆ ಸಾಹಸ ಸಿಂಹ ಡಾ.ವಿಷ್ಣುವರ್ಧನ್ ಅವರ ಸ್ಮಾರಕವು ಸಾಂಸ್ಕøತಿಕ ನಗರಿ ಮೈಸೂರಿನಲ್ಲಿ ನಿರ್ಮಾಣವಾಗುತ್ತಿದ್ದು, ಶೀಘ್ರದಲ್ಲೇ ಉದ್ಘಾಟನೆ ನೆರವೇರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಷ್ಣುವರ್ಧನ್ ಅವರ ಸ್ಮಾರಕದ ಕಾಮಗಾರಿಯನ್ನು ಆದಷ್ಟು ಬೇಗ ಮುಗಿಸಿ ಲೋಕಾರ್ಪಣೆ ಮಾಡಬೇಕೆಂಬುದು ಅಭಿಮಾನಿಗಳ ಒತ್ತಾಸೆಯಾಗಿದೆ. ಶೀಘ್ರದಲ್ಲೇ ಅವರ ಆಸೆಯನ್ನು ನೆರವೇರಿಸಲಾಗುವುದು ಎಂದು ಭರವಸೆ ನೀಡಿದರು. ಸ್ಮಾರಕ ನಿರ್ಮಾಣ ವಿವಿಧ ಕಾರಣಗಳಿಂದ ವಿಳಂಬವಾಗಿತ್ತು. ಈಗ ಎಲ್ಲವೂ ಸರಿ ಹೋಗಿರುವುದರಿಂದ ಯಾವುದೇ ಸಮಸ್ಯೆ ಇಲ್ಲ. ಕುಟುಂಬದವರ ಅಪೇಕ್ಷೆಯಂತೆ […]

ಜ್ಯೋತಿರಾತ್ಯ ಸಿಂಧಿಯಾ ಘರ್ ವಾಪ್ಸಿ ಸಾಧ್ಯತೆ

ಶಿಮ್ಲಾ, ನ.25- ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಗೊಂಡು ಕೇಂದ್ರ ಸಚಿವರಾಗಿರುವ ಜ್ಯೋತಿರಾತ್ಯ ಸಿಂಧಿಯಾ ಅವರು ಮತ್ತೆ ಘರ್ ವಾಪ್ಸಿ ಮಾಡುವ ಸಾಧ್ಯತೆಗಳಿವೆ ಎನ್ನಲಾಗಿದೆ. ರಾಹುಲ್‍ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಹಮ್ಮಿಕೊಂಡಿರುವ ಭಾರತ್ ಜೋಡೋ ಯಾತ್ರೆ ಮಧ್ಯ ಪ್ರದೇಶ ಪ್ರವೇಶಿಸಿರುವುದನ್ನು ಇತ್ತಿಚೆಗೆ ಸಿಂಧಿಯಾ ಸ್ವಾಗತಿಸಿದ್ದರು. ಈ ಬೆಳವಣಿಗೆ ಬೆನ್ನಲ್ಲೆ ಅವರು ಮತ್ತೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರುವ ಸಾಧ್ಯತೆಗಳಿವೆ ಎಂದು ಬಿಂಬಿಸಲಾಗುತ್ತಿದೆ. ಮಧ್ಯಪ್ರದೇಶದಲ್ಲಿ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆಗೆ ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರ ಸ್ವಾಗತ […]

ಡಿಜಿಟಲ್ ಮಾಧ್ಯಮಕ್ಕೆ ಬೀಳಲಿದೆ ಕಡಿವಾಣ

ಜೈಪುರ,ನ.24- ಡಿಜಿಟಲ್ ಹಾಗೂ ವಿದ್ಯುನ್ಮಾನ ಮಾಧ್ಯಮಗಳಿಗೆ ನಿಯಂತ್ರಣ ಹಾಕಲಾಗುವುದು ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ತಿಳಿಸಿದ್ದಾರೆ. ಈ ಹಿಂದೆ ಸುದ್ದಿಗಳು ಏಕಮುಖವಾಗಿದ್ದವು, ಆದರೆ, ಇತ್ತಿಚೆಗೆ ಡಿಜಿಟಲ್ ಮಾಧ್ಯಮ ಬಿತ್ತರಿಸುವ ಸುದ್ದಿಗಳು ಬಹು ಆಯಾಮಗಳನ್ನು ಹೊಂದಿರುವುದರಿಂದ ಅವುಗಳ ನಿಯಂತ್ರಣಕ್ಕೆ ಶೀಘ್ರ ಮಸೂದೆ ಮಂಡಿಸಲಾಗುವುದು ಎಂದು ಅವರು ಹೇಳಿದ್ದಾರೆ. ಡಿಜಿಟಲ್ ಮಾಧ್ಯಮವು ಅವಕಾಶಗಳನ್ನು ಮತ್ತು ಸವಾಲುಗಳನ್ನು ಹೊಂದಿವೆ. ಅವುಗಳ ಸಮತೋಲನಕ್ಕೆ ಏನು ಮಾಡಬಹುದು ಎಂಬ ಬಗ್ಗೆ ನಾವು ಚಿಂತಿಸುತ್ತಿದ್ದೇವೆ ಎಂದು ಅವರು ತಿಳಿಸಿದ್ದಾರೆ. […]

ಪಿಎಸ್‍ಐ ನೇಮಕಾತಿ ಮರು ಪರೀಕ್ಷೆ ಶೀಘ್ರದಲ್ಲೇ ತೀರ್ಮಾನ

ಬೆಂಗಳೂರು, ಆ.3- ಪೊಲೀಸ್ ಸಬ್‍ಇನ್‍ಸ್ಪೆಕ್ಟರ್ ನೇಮಕಾತಿಗೆ ಮರುಪರೀಕ್ಷೆ ಯನ್ನು ಶೀಘ್ರದಲ್ಲಿಯೇ ನಡೆಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ರವರು ತಿಳಿಸಿದ್ದಾರೆ. ತಮ್ಮ ನಿವಾಸದಲ್ಲಿಂದು ಭೇಟಿಯಾದ ಸುದ್ದಿಗಾರರ ಜೊತೆ ಮಾತನಾಡಿ ಪಿಎಸ್‍ಐ ಹುದ್ದೆ ಅಪೇಕ್ಷಿತ ಅಭ್ಯರ್ಥಿಗಳು ಭರವಸೆ ಕಳೆದುಕೊಳ್ಲಬಾರದು ಮರು ಪರೀಕ್ಷೆ ನಡೆಸಲು ಶೀಘ್ರದಲ್ಲಿಯೇ ಸರ್ಕಾರ ನಿರ್ಧಾರ ಕೈಗೊಳ್ಳಲಿದೆ ಎಂದರು. ಪಿ ಎಸ್ ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದ ಬಗ್ಗೆ ಸಿಐಡಿ ಪೊಲೀಸರು ತನಿಖೆ ನಡೆಸುತ್ತಿದ್ದು, ಈ ಪ್ರಕ್ರಿಯೆ ಮುಗಿದ ನಂತರ ಮರು ಪರೀಕ್ಷೆ ನಡೆಸುವ […]