ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಇಬ್ಬರು ಉಗ್ರರ ಎನ್‍ಕೌಂಟರ್

ಶ್ರೀನಗರ,ಅ.10- ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿಂದು ಮುಂಜಾನೆ ಭದ್ರತಾ ಪಡೆಗಳು ನಡೆಸಿದ ಎನ್‍ಕೌಂಟರ್‍ನಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ. ದಕ್ಷಿಣ ಕಾಶ್ಮೀರ ಜಿಲ್ಲೆಯ ಟ್ಯಾಂಗ್ಪಾವಾ ಪ್ರದೇಶದಲ್ಲಿ ಉಗ್ರರು ಅಡಗಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆಯನ್ನು ಆರಂಭಿಸಿತು. ಸ್ಥಳಕ್ಕೆ ಬರುತ್ತಿದಂತೆ ಭದ್ರತಾ ಪಡೆಗಳ ಮೇಲೆ ಉಗ್ರರು ಅವರ ಮೇಲೆ ಗುಂಡು ಹಾರಿಸಿದ್ದಾರೆ ಸುಮಾರು ಗಂಟೆಗಳ ಕಾಲ ಗುಂಡಿನ ಚಕಮಕಿ ನಡೆದಿದ್ದು ಅಂತಿಮವಾಗಿ ಎನ್‍ಕೌಂಟರ್‍ನಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ ಎಂದು ಪೊಲೀಸ್ ಅಕಾರಿಯೊಬ್ಬರು ತಿಳಿಸಿದ್ದಾರೆ. […]