“ಕೋಮುದ್ವೇಷದ ವಿಷ ಬೀಜ ಬಿತ್ತಲು ತನು-ಮನ-ಧನ ಅರ್ಪಿಸುವ ಪಕ್ಷ ಬಿಜೆಪಿ”

ಬೆಂಗಳೂರು,ಮಾ.13- ಕಪೋಲ ಕಲ್ಪಿತ ಪಾತ್ರಗಳನ್ನು ಸೃಷ್ಟಿಸಿ, ಕೋಮುದ್ವೇಷ ಹರಡಿ, ಜನರ ತಲೆಯಲ್ಲಿ ವಿಷ ಬೀಜ ಬಿತ್ತಿ ಹೆಮ್ಮರವಾಗಿ ಬೆಳೆಯಲು ತನು-ಮನ-ಧನವನ್ನೆಲ್ಲ ಅರ್ಪಿಸುವ ಪಕ್ಷವೆಂದರೆ ಬಿಜೆಪಿ ಎಂದು ಜೆಡಿಎಸ್ ಆರೋಪಿಸಿದೆ. ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಜೆಡಿಎಸ್, ಟಿಪ್ಪು ಸುಲ್ತಾನನನ್ನು ಕೊಂದವರು ಎನ್ನಲಾಗುವ ಕಾಲ್ಪನಿಕ ಪಾತ್ರಗಳಾದ ಉರಿಗೌಡ, ನಂಜೇಗೌಡ ಎಂಬ ಹೆಸರುಗಳನ್ನು ಪ್ರಧಾನಿ ರೋಡ್ ಶೋ ನಡೆಸಿದ ಮಹಾದ್ವಾರಕ್ಕೆ ಇಟ್ಟಿದ್ದು ಏಕೆ ಎಂದು ಪ್ರಶ್ನಿಸಿದೆ. ಮಹಾದ್ವಾರಕ್ಕೆ ಇದ್ದ ಒಕ್ಕಲಿಗರ ಗುರು ಆದಿಚುಂಚನಗಿರಿ ಪೀಠಾಧ್ಯಕ್ಷರಾಗಿದ್ದ ಡಾ. ಶ್ರೀ ಬಾಲಗಂಗಾಧರನಾಥ […]