ಸ್ವಾತಂತ್ರ್ಯೋತ್ಸವಕ್ಕೂ ಮುನ್ನ ವಿಧ್ವಂಸಕ ಕೃತ್ಯಕ್ಕೆ ಉಗ್ರರ ಸ್ಕೆಚ್, ರಾಜ್ಯದ ಎಲ್ಲೆಡೆ ಕಟ್ಟೆಚ್ಚರ

ಬೆಂಗಳೂರು,ಆ.2-ರಾಜ್ಯದಲ್ಲಿ ಕೆಲವು ಸಮಾಜಘಾತುಕ ಶಕ್ತಿಗಳು ಸ್ವಾತಂತ್ರ್ಯ ದಿನಾಚರಣೆ ಮುನ್ನ ವಿಧ್ವಂಸಕ ಕೃತ್ಯ ನಡೆಸುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸಬೇಕೆಂದು ಕೇಂದ್ರ ಗೃಹ ಇಲಾಖೆ ಸೂಚನೆ ನೀಡಿದೆ. ಆ.15ರ ಸ್ವಾತಂತ್ರ್ಯ ದಿನಾಚರಣೆಗೂ ಮುನ್ನ ಮಂಗಳೂರು, ಉಡುಪಿ, ಕಾರವಾರ(ಭಟ್ಕಳ), ಮಡಿಕೇರಿ, ಬೆಂಗಳೂರು, ಬೆಳಗಾವಿ, ಹುಬ್ಬಳ್ಳಿ, ಶಿವಮೊಗ್ಗ, ಚಿಕ್ಕಮಗಳೂರು ಸೇರಿದಂತೆ ಮತ್ತಿತರ ಕಡೆ ಹೆಚ್ಚಿನ ಭದ್ರತೆಯನ್ನು ಕೈಗೊಳ್ಳಬೇಕೆಂದು ಗೃಹ ಇಲಾಖೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಕೇಂದ್ರ ಗುಪ್ತಚರ ವಿಭಾಗವು ಗೃಹ ಇಲಾಖೆಗೆ […]