ಸಬೂಬು ಹೇಳದೆ ಕಲಾಪಕ್ಕೆ ಬನ್ನಿ : ಕಾಗೇರಿ

ಬೆಂಗಳೂರು,ಫೆ.9- ನಾಳೆಯಿಂದ ಆರಂಭವಾಗಲಿರುವ ಜಂಟಿ ಅಧಿವೇಶನ ವರ್ಷದ ಕೊನೆಯ ಅಧಿವೇಶನವಾಗಿರುವ ಹಿನ್ನಲೆಯಲ್ಲಿ ಸದಸ್ಯರು ಸಬೂಬು ಹೇಳದೆ ಕಲಾಪದಲ್ಲಿ ಕಡ್ಡಾಯವಾಗಿ ಪಾಲ್ಗೊಳ್ಳಬೇಕೆಂದು ವಿಧಾಸಭೆ ಸಭಾಪತಿ ವಿಶ್ವೇಶ್ವರ ಹೆಗಡೆ ಕಾಗೇರಿ ಮನವಿ ಮಾಡಿದ್ದಾರೆ. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ವಿಧಾನಸಭೆ ಚುನಾವಣೆ ಬರುತ್ತಿದೆ ಎಂದು ನೆಪ ಹೇಳದೆ ಎಲ್ಲ ಸದಸ್ಯರು ಕಡ್ಡಾಯವಾಗಿ ಕಲಾಪದಲ್ಲಿ ಪಾಲ್ಗೊಳ್ಳಬೇಕು. ನಿಮ್ಮ ಜವಾಬ್ದಾರಿ ಅರಿತು ಪಾಲ್ಗೊಳ್ಳಿ. ಇದು ಪ್ರಜಾಪ್ರಭುತ್ವದ ಜವಾಬ್ದಾರಿ ಎಂಬುದನ್ನು ಯಾರೊಬ್ಬರು ಮರೆಯಬಾರದು ಎಂದು ಸಲಹೆ ಮಾಡಿದರು. ಯಾವುದೇ ಸದಸ್ಯರು ಮೊದಲೇ ಕಾರ್ಯಕ್ರಮವನ್ನು ನಿಗದಿಪಡಿಸುವುದಿದ್ದರೆ ಇದು […]

ಚಳಿಗಾಲದ ಅಧಿವೇಶನ: ಅಗತ್ಯ ಸೌಲಭ್ಯಗಳಿಗೆ ಸ್ಪೀಕರ್ ಸೂಚನೆ

ಬೆಳಗಾವಿ,ಡಿ.12- ಸುವರ್ಣ ವಿಧಾನಸೌಧದಲ್ಲಿ ಡಿ.19 ರಿಂದ 30 ರವರೆಗೆ ವಿಧಾನಮಂಡಳ ಚಳಿಗಾಲ ಅಧಿವೇಶನ ನಡೆಯಲಿದ್ದು, ಈ ಅವಧಿಯಲ್ಲಿ ವಸತಿ, ಊಟೋಪಾಹಾರ, ಸಾರಿಗೆ ಮತ್ತಿತರ ವ್ಯವಸ್ಥೆಯು ಪ್ರತಿ ಬಾರಿಯಂತೆ ಅಚ್ಚುಕಟ್ಟಾಗಿ ವ್ಯವಸ್ಥೆ ಮಾಡಬೇಕು ಎಂದು ವಿಧಾನಸಭೆ ಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ವಿಧಾನಮಂಡಳದ ಚಳಿಗಾಲ ಅಧಿವೇಶನದ ಹಿನ್ನೆಲೆಯಲ್ಲಿ ಸುವರ್ಣ ವಿಧಾನಸೌಧದಲ್ಲಿಂದು ನಡೆದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ವಸತಿ, ಊಟ, ಸಾರಿಗೆ ವ್ಯವಸ್ಥೆ ಸಮರ್ಪಕವಾಗಿ ಕಲ್ಪಿಸಿದಾಗ ಇಡೀ ಅಧಿವೇಶನ ಸುಸೂತ್ರವಾಗಿ ನಡೆಯಲಿದೆ. […]