ಶಾಸಕರು, ಸಭಾಪತಿ, ಸ್ಪೀಕರ್ ವೇತನ ಭತ್ಯೆ ಹೆಚ್ಚಳ

ಬೆಂಗಳೂರು, ಫೆ.22- ಶಾಸಕರು, ಸಭಾಧ್ಯಕ್ಷರು, ಸಭಾಪತಿ ಅವರ ವೇತನ ಭತ್ಯೆ ಪರಿಷ್ಕರಣೆಗೆ ಅವಕಾಶ ಮಾಡಿಕೊಡುವ ಕರ್ನಾಟಕ ವಿಧಾನಮಂಡಲದವರ ಸಂಬಳಗಳು, ನಿವೃತ್ತಿ ವೇತನಗಳು ಮತ್ತು ಭತ್ಯೆಗಳ (ತಿದ್ದುಪಡಿ) ವಿಧೇಯಕ-2022 ಹಾಗೂ ಕರ್ನಾಟಕ ಮಂತ್ರಿಗಳ ಸಂಬಳಗಳು ಮತ್ತು ಭತ್ಯೆಗಳ (ತಿದ್ದುಪಡಿ) ವಿಧೇಯಕ-2022ಕ್ಕೆ ವಿಧಾನ ಸಭೆಯಲ್ಲಿಂದು ಒಪ್ಪಿಗೆ ದೊರೆಯಿತು. ವಿಧಾನಮಂಡಳದವರ ಸಂಬಳಗಳು, ನಿವೃತ್ತಿ ವೇತನಗಳು ಮತ್ತು ಭತ್ಯೆಗಳ ಪರಿಷ್ಕರಣೆಯಿಂದ ವಾರ್ಷಿಕ 67 ಕೋಟಿ ರೂ. ಹೆಚ್ಚುವರಿ ವೆಚ್ಚ ಉಂಟಾಗಲಿದೆ. ಮಂತ್ರಿಗಳ ಸಂಬಳಗಳು ಮತ್ತು ಭತ್ಯೆಗಳ (ತಿದ್ದುಪಡಿ) ವಿಧೇಯಕದಿಂದ 25.40 ಕೋಟಿ ರೂ. […]