ಹಾಜರಿರಬೇಕಾದ ಸಚಿವರೇ ಸದನದಲ್ಲಿಲ್ಲ : ಸಭಾಧ್ಯಕ್ಷರು ಅಸಮಾಧಾನ

ಬೆಂಗಳೂರು,ಮಾ.9- ಕಡ್ಡಾಯವಾಗಿ ಹಾಜರಿರಬೇಕಾದ ಸಚಿವರು ಸದನದಲ್ಲಿ ಇಲ್ಲದಿರುವ ಬಗ್ಗೆ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಪ್ರಶ್ನೋತ್ತರ ವೇಳೆಯಲ್ಲಿ ಶಾಸಕ ರಾಜೇಗೌಡ ಅವರ ಪ್ರಶ್ನೆಗೆ ರೇಷ್ಮೆ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ಉತ್ತರಿಸಬೇಕಾಗಿತ್ತು. ಆ ಸಂದರ್ಭದಲ್ಲಿ ಅವರು ಸದನದಲ್ಲಿ ಹಾಜರಿರಲಿಲ್ಲ. ಆಗ ಅಸಮಾಧಾನಗೊಂಡ ಸಭಾಧ್ಯಕ್ಷರು ಪ್ರಶ್ನೋತ್ತರ ಕಲಾಪದಲ್ಲಿ ಸಂಬಂಧಿಸಿದ ಸಚಿವರು ಕಡ್ಡಾಯವಾಗಿ ಹಾಜರಿರಬೇಕು. ಬಂದರೂ ಆಯಿತು, ಬಾರದಿದ್ದರೂ ಆಯಿತು ಎಂಬ ಮನಸ್ಥಿತಿ ಸರಿಯಲ್ಲ ಎಂದರು. ಕಡ್ಡಾಯವಾಗಿ ಹಾಜರಿರಬೇಕಿರುವ ಸಚಿವರಾದ ಕೆ.ಎಸ್.ಈಶ್ವರಪ್ಪ, ಶ್ರೀರಾಮುಲು, ಸಿ.ಸಿ.ಪಾಟೀಲ್, […]