ಸನ್ನಡತೆ ತೋರಿದ 84 ಕೈದಿಗಳಿಗೆ ಬಿಡುಗಡೆ ಭಾಗ್ಯ

ಬೆಂಗಳೂರು,ಜು.13- 75ನೇ ಆಜಾದಿ ಕಾ ಅಮೃತ್ ಮಹೋತ್ಸವದ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ಜೈಲುಗಳಲ್ಲಿ ಶಿಕ್ಷೆ ಅನುಭವಿಸುತ್ತಿರುವ ಸುಮಾರು 84 ಕೈದಿಗಳನ್ನು ಸನ್ನಡತೆ ಆಧಾರದ ಮೇಲೆ ಬಿಡುಗಡೆ ಮಾಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಪ್ರತಿ ವರ್ಷ ಆ.15ರ ಸ್ವಾತಂತ್ರ್ಯದಿನಾಚರಣೆ ಹಿನ್ನೆಲೆಯಲ್ಲಿ ಶಿಕ್ಷೆಗೆ ಒಳಪಟ್ಟಿರುವ ಕೈದಿಗಳನ್ನು ಸನ್ನಡತೆ ಆಧಾರದ ಮೇಲೆ ಬಿಡುಗಡೆ ಮಾಡುವುದು ಸಂಪ್ರದಾಯವಾಗಿದೆ. ಅದರಂತೆ ಈ ಬಾರಿ 84 ಕೈದಿಗಳಿಗೆ ಜೈಲಿನಿಂದ ಬಿಡುಗಡೆ ಭಾಗ್ಯ ದೊರೆಯಲಿದೆ. ರಾಜಧಾನಿ ಬೆಂಗಳೂರು, ಬಳ್ಳಾರಿ, ಬೆಳಗಾವಿ, ಶಿವಮೊಗ್ಗ, ದಾವಣೆಗೆರೆ, ಮೈಸೂರು, ಕಲಬುರಗಿ ಸೇರಿದಂತೆ […]