ಮಹಿಳೆಯರ ಮತ ಗೆಲ್ಲಲು ರಾಜಕೀಯ ಪಕ್ಷಗಳಿಂದ ಭರ್ಜರಿ ಘೋಷಣೆ

ಬೆಂಗಳೂರು,ಜ.24-ಯಾವುದೇ ಚುನಾವಣೆಯಲ್ಲಿ ಪಕ್ಷ ಮತ್ತು ಅಭ್ಯರ್ಥಿಗಳ ಸೋಲು ಗೆಲುವಿನಲ್ಲಿ ನಿರ್ಣಾಯಕ ಪಾತ್ರ ವಹಿಸಲಿರುವ ಮಹಿಳಾ ಮತದಾರರ ಮನಗೆಲ್ಲಲು ಪ್ರಮುಖ ರಾಜಕೀಯ ಪಕ್ಷಗಳು ಮುಂದಾಗಿವೆ. ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಸೇರಿದಂತೆ ಎಲ್ಲ ರಾಜಕೀಯ ಪಕ್ಷಗಳು ನಾರಿಯರ ಮನಗೆಲ್ಲಲು ವಿಶೇಷ ಕಾರ್ಯಕ್ರಮಗಳನ್ನು ಜಾರಿಗೆ ತರುವುದಾಗಿ ಭರಪೂರ ಭರವಸೆಗಳನ್ನು ಘೋಷಣೆ ಮಾಡುತ್ತಿದ್ದಾರೆ.ರಾಜ್ಯದಲ್ಲಿ ಈ ಬಾರಿ ಒಟ್ಟು 5, 05,48,553ಮತದಾರರು ಇದ್ದು, ಇದರಲ್ಲಿ 2,51,76,605 ಪುರುಷರು ಮತ್ತು 2,47,53,779 ಮಹಿಳಾ ಮತದಾರರು ಇದ್ದಾರೆ. ಪುರುಷರಿಗೆ ಹೋಲಿಸಿದರೆ ಮಹಿಳಾ ಮತದಾರರ ಸಂಖ್ಯೆ ಕೇವಲ 3,55,399 […]