ಅತಿಥಿ ಉಪನ್ಯಾಸಕರ ಖಾಯಂಗೆ ಆಗ್ರಹ

ಬೆಂಗಳೂರು, ಜ.5- ಪದವಿ ಹಾಗೂ ಪಿಯುಸಿ ಕಾಲೇಜುಗಳ ಅತಿಥಿ ಉಪನ್ಯಾಸಕರನ್ನು ಖಾಯಂಗೊಳಿಸುವುದಾಗಿ ಸರ್ಕಾರ ಘೋಷಣೆ ಮಾಡಬೇಕೆಂದು ವಿಧಾನ ಪರಿಷತ್ ಸದಸ್ಯ ಶ್ರೀಕಂಠೇಗೌಡ ಆಗ್ರಹಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅತಿಥಿ ಉಪನ್ಯಾಸಕರು ಕಳೆದ 26 ದಿನಗಳಿಂದ ತರಗತಿ ಬಹಿಷ್ಕರಿಸಿ ಧರಣಿ ಮಾಡುತ್ತಿದ್ದಾರೆ. ಈ ಹಿಂದೆ ಗುತ್ತಿಗೆ, ಅರೆಕಾಲಿಕ ಉಪನ್ಯಾಸಕರನ್ನು ಖಾಯಂಗೊಳಿಸಿರುವ ನಿದರ್ಶನವಿದೆ. ಹೀಗಾಗಿ ಅತಿಥಿ ಉಪನ್ಯಾಸಕರ ವೇತನ ಹೆಚ್ಚಳ ಮಾಡುವುದು ಪರಿಹಾರವಲ್ಲ. ಅವರಿಗೆ ಸೇವಾ ಭದ್ರತೆ ನೀಡಬೇಕು ಎಂದರು. ರಾಜ್ಯದಲ್ಲಿ 2.86 ಲಕ್ಷ ವಿವಿಧ ಹುದ್ದೆಗಳು ಖಾಲಿ ಇವೆ. […]