ಎಚ್‍ಡಿಕೆ ಹುಟ್ಟುಹಬ್ಬದ ಅಂಗವಾಗಿ ನಾಳೆ ಶ್ರೀನಿವಾಸ ಕಲ್ಯಾಣ ಮಹೋತ್ಸವ

ಬೆಂಗಳೂರು, ಡಿ.15- ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾದ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ಹುಟ್ಟುಹಬ್ಬದ ಅಂಗವಾಗಿ ನಾಳೆ ರಾಮನಗರದಲ್ಲಿ ಶ್ರೀನಿವಾಸ ಕಲ್ಯಾಣ ಮಹೋತ್ಸವವನ್ನು ಹಮ್ಮಿಕೊಳ್ಳಲಾಗಿದೆ. ಕುಮಾರಸ್ವಾಮಿ ಅವರಿಗೆ 62 ವರ್ಷಗಳು ತುಂಬಿದ್ದು, ನಾಳೆ 63ನೇ ವರ್ಷಕ್ಕೆ ಪಾದಾರ್ಪಣೆ ಮಾಡಲಿದ್ದಾರೆ. ಹೀಗಾಗಿ ರಾಮನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ತಿರುಪತಿ ತಿಮ್ಮಪ್ಪನ ದೇವಾಲಯದ ಮಾದರಿ ಗೋಪುರ ನಿರ್ಮಿಸಿ ಬೃಹತ್ ವೇದಿಕೆ ಸಿದ್ಧಪಡಿಸಲಾಗಿದೆ. ನಾಳೆ ಸಂಜೆ ಶ್ರೀನಿವಾಸ ಕಲ್ಯಾಣ ಮಹೋತ್ಸವ ಜರುಗಲಿದ್ದು, ಅಪಾರ ಸಂಖ್ಯೆಯ ಅಭಿಮಾನಿಗಳು ಪಾಲ್ಗೊಳ್ಳಲಿದ್ದಾರೆ. ಶ್ರೀನಿವಾಸ ಕಲ್ಯಾಣ […]