ರಮೇಶ್ ಕುಮಾರ್ ವಿರುದ್ಧ ಬಳಸಿದ್ದ ಅಸಂಬದ್ಧ ಪದ ವಾಪಸ್ ಪಡೆದ ಹೆಚ್‌ಡಿಕೆ

ಬೆಂಗಳೂರು, ನ.23- ಮಾಜಿ ಸ್ಪೀಕರ್ ರಮೇಶ್ ಕುಮಾರ್ ಬಗ್ಗೆ ನಾನು ಬಳಸಿದೆ ಎನ್ನಲಾದ ಪದ ಸ್ವತಃ ನನಗೂ ನೋವುಂಟು ಮಾಡಿದ್ದು, ಆ ಮಾತನ್ನು ಹಿಂಪಡೆಯುವುದಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು ಆ ಪದ ಬಳಕೆ ನನ್ನ ಜಾಯಮಾನವಲ್ಲ, ನನ್ನ ವ್ಯಕ್ತಿತ್ವವೂ ಅಲ್ಲ. ಈ ಮಾತಿನಿಂದ ರಮೇಶ್ ಕುಮಾರ್ ಅವರಿಗಾಗಲಿ, ಇನ್ನಾರಿಗೇ ಆಗಲಿ ನೋವಾಗಿದ್ದರೆ ನನ್ನ ವಿಷಾದವಿದೆ. ಆ ಮಾತನ್ನು ಹಿಂಪಡೆಯುತ್ತೇನೆ ಎಂದಿದ್ದಾರೆ. ನಿನ್ನೆಯ ದಿನ ಶ್ರೀನಿವಾಸಪುರ ವಿಧಾನಸಭೆ ಕ್ಷೇತ್ರದ ಬಂಗವಾದಿ […]