ಕಾಂಗ್ರೆಸ್‌ ಸಭೆಯಲ್ಲೇ ಹೃದಯಾಘಾತದಿಂದ ಮಾಜಿ ಶಾಸಕ ಶ್ರೀಶೈಲಪ್ಪ ಬಿದನೂರು ನಿಧನ

ಬೆಂಗಳೂರು, ನ.25- ವಿಧಾನಸಭೆ ಚುನಾವಣೆಯಲ್ಲಿ ಸ್ರ್ಪಸಲು ಕಾಂಗ್ರೆಸ್‍ಗೆ ಅರ್ಜಿ ಸಲ್ಲಿಸಿದ್ದ ಆಕಾಂಕ್ಷಿಗಳ ಸಭೆಯಲ್ಲಿ ಭಾಗವಹಿಸಲು ಆಗಮಿಸಿದ್ದ ಗದಗದ ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ರೋಣ ಮತ್ತು ಗದಗ ಕ್ಷೇತ್ರಗಳಿಂದ ಎರಡು ಬಾರಿ ಶ್ರೀಶೈಲಪ್ಪ ಶಾಸಕರಾಗಿ ಆಯ್ಕೆಯಾಗಿ ಕೆಲಸ ಮಾಡಿದ್ದರು. ಮೊದಲು ಬಿಜೆಪಿಯಲ್ಲಿದ್ದ ಅವರು 2019ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದರು. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಗದಗ ಕ್ಷೇತ್ರದಿಂದ ಸ್ರ್ಪಸಲು ಅರ್ಜಿ ಸಲ್ಲಿಸಿದ್ದರು. ಇಂದು ನಡೆದ ಆಕಾಂಕ್ಷಿಗಳ ಸಭೆಯಲ್ಲಿ ಭಾಗವಹಿಸಲು ಅವರು ಆಗಮಿಸಿದ್ದರು. ಆರಂಭದಲ್ಲೇ ವಾಂತಿಯಾಗಿದ್ದು […]