SSC ಪರೀಕ್ಷೆ ಕನ್ನಡದಲ್ಲಿ ಬರೆಯಲು ಅವಕಾಶ ನೀಡದಿದ್ದರೆ ಹೋರಾಟ

ಬೆಂಗಳೂರು, ಅ.29- ಪೇದೆ ಆಯ್ಕೆಗೆ ಅರ್ಜಿ ಆಹ್ವಾನಿಸಿರುವ ಕೇಂದ್ರ ಸಿಬ್ಬಂದಿ ಆಯ್ಕೆ ಆಯೋಗ (ಎಸ್‍ಎಸ್‍ಸಿ) ಹಿಂದಿ, ಇಂಗ್ಲೀಷ್ ನಲ್ಲಿ ಮಾತ್ರ ಪರೀಕ್ಷೆ ಬರೆಯುವ ಅವಕಾಶ ನೀಡಿದೆ. ಕೂಡಲೇ ಈ ಕನ್ನಡ ವಿರೋಧಿ ಆದೇಶ ಹಿಂಪಡೆದು, ಹೊಸ ಆದೇಶ ಹೊರಡಿಸಿ ಕನ್ನಡವೂ ಸೇರಿ ಎಲ್ಲಾ ಪ್ರಾದೇಶಿಕ ಭಾಷೆಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಈ ಆದೇಶ ಹಿಂಪಡೆಯದಿದ್ದರೆ, ಬೀದಿಗಿಳಿದು ಕನ್ನಡಿಗರ ಶಕ್ತಿ ಏನೆಂದು ತೋರಿಸಬೇಕಾಗುತ್ತದೆ […]