ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸುಸಜ್ಜಿತ ಕ್ರೀಡಾಂಗಣ ನಿರ್ಮಾಣ

ಬೆಂಗಳೂರು, ಫೆ.17-ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಒಂದು ಸುಸಜ್ಜಿತವಾದ ಕ್ರೀಡಾ ಅಂಕಣವನ್ನು ನರೇಗಾ ಯೋಜನೆಯಡಿ 5 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದರು. ವಿಧಾನಸಭೆಯಲ್ಲಿಂದ 2023-24ನೇ ಸಾಲಿನ ಮುಂಗಡಪತ್ರ ಮಂಡಿಸಿದ ಅವರು, ಗ್ರಾಮೀಣ ಮತ್ತು ಸಾಂಪ್ರದಾಯಿಕ ಕ್ರೀಡೆಗಳಾದ ಖೋ-ಖೋ, ಕುಸ್ತಿ, ಕಬಡ್ಡಿ, ಕಂಬಳ, ಎತ್ತಿನಗಾಡಿ ಓಟ ಮುಂತಾದವುಗಳನ್ನು ಇಂದಿನ ಮಕ್ಕಳಿಗೆ ಪರಿಚಯಿಸಲು ಮತ್ತು ಉತ್ತೇಜಿಸಲು ಗ್ರಾಮ ಮಟ್ಟದಿಂದ ರಾಜ್ಯ ಮಟ್ಟದವರೆಗೆ ಗ್ರಾಮೀಣ ಕ್ರೀಡಾಕೂಟಗಳನ್ನು ಆಯೋಜಿಸಲಾಗುವುದು ಎಂದರು. ಖೈದಿಗಳಿಗೂ ಬಜೆಟ್‍ನಲ್ಲಿ ಗುಡ್ ನ್ಯೂಸ್ […]