ಸಕಲ ಸರ್ಕಾರಿ ಗೌರವಗಳೊಂದಿಗೆ ಲತಾ ಮಂಗೇಶ್ಕರ್ ಅಂತ್ಯಕ್ರಿಯೆ : ಉದ್ಧವ್ ಠಾಕ್ರೆ

ಮುಂಬೈ, ಫೆ.6- ಇಂದು ಬೆಳಗ್ಗೆ ಇಲ್ಲಿನ ಬ್ರೀಚ್‍ಕ್ಯಾಂಡಿ ಆಸ್ಪತ್ರೆಯಲ್ಲಿ ನಿಧನರಾದ ಗಾನ ಕೋಗಿಲೆ ಲತಾ ಮಂಗೇಶ್ಕರ್ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ಇಂದು ಸಂಜೆ ನೆರವೇರಿಸಲಾಗುವುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಹೇಳಿದ್ದಾರೆ. ಲತಾ ಮಂಗೇಶ್ಕರ್ ಅವರ ಅಗಲಿಕೆ ಒಂದು ವೈಭವದ ಯುಗದ ಅಂತ್ಯವನ್ನು ಸೂಚಿಸುತ್ತದೆ ಎಂದು ಠಾಕ್ರೆ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಲತಾ ಅವರ ಮಧುರ ಧ್ವನಿ ಅಮರ. ಅವರ ನಿಧನ ವಾರ್ತೆ ಕೇಳಿ ಪ್ರತಿಯೊಬ್ಬರೂ ದುಃಖಿತರಾಗಿದ್ದಾರೆ ಎಂದು ಠಾಕ್ರೆ […]