ಗುರು ರಾಘವೇಂದ್ರ ಸಹಕಾರ ಬ್ಯಾಂಕ್‍ನ ಹಗರಣ ಸಿಬಿಐ ತನಿಖೆಗೆ

ಬೆಂಗಳೂರು,ಫೆ.14- ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್‍ನ ಹಗರಣವನ್ನು ಸಿಬಿಐ ತನಿಖೆಗೆ ವಹಿಸಲು ಎಲ್ಲಾ ರೀತಿಯ ತಯಾರಿಗಳು ನಡೆದಿದ್ದು, ಶೀಘ್ರವೇ ಗೃಹ ಇಲಾಖೆ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ. ವಿಧಾನಪರಿಷತ್‍ನ ಪ್ರಶ್ನೋತ್ತರದಲ್ಲಿ ಸದಸ್ಯ ಯು.ಬಿ.ವೆಂಕಟೇಶ್ ವಿಷಯ ಪ್ರಸ್ತಾಪಿಸಿ ಬ್ಯಾಂಕ್‍ನಿಂದ ಸಾಲ ಪಡೆದವರ ಆಸ್ತಿ ಜಪ್ತಿ ಮಾಡಲು ಸಾಧ್ಯವಿಲ್ಲ. ಏಕೆಂದರೆ ಅಡಮಾನಕ್ಕಾಗಿ ನೀಡಿರುವ ದಾಖಲೆಗಳು ಬೇರೆಯವರಿಗೆ ಸೇರಿವೆ. ಸಾಲ ವಸೂಲಿ ಮಾಡುತ್ತಿದ್ದೇವೆ. ಆಸ್ತಿ ಜಪ್ತಿ ಮಾಡುತ್ತೇವೆ ಎನ್ನುತ್ತಾ ಸರ್ಕಾರ ಈವರೆಗೂ ಸುಳ್ಳು ಹೇಳುತ್ತಾ […]