ಸರ್ಕಾರಿ ವಿದ್ಯುತ್ ಕಂಪೆನಿಗಳ ಖಾಸಗೀಕರಣ ವಿರೋಧಿಸಿ ಸಿಬ್ಬಂದಿಗಳ ಮುಷ್ಕರ

ಮುಂಬೈ,ಜ.4- ಸರ್ಕಾರಿ ಸ್ವಾಮ್ಯದ ಮೂರು ವಿದ್ಯುತ್ ಕಂಪೆನಿಗಳನ್ನು ಖಾಸಗೀಕರಣಗೊಳಿಸುವುದನ್ನು ವಿರೋಧಿಸಿ, ಕಳೆದ 72 ಗಂಟೆಗಳಿಂದ ಮುಷ್ಕರ ನಡೆಸುತ್ತಿರುವ ಸಿಬ್ಬಂದಿ ಮತ್ತು ಅಧಿಕಾರಿಗಳ ವಿರುದ್ಧ ಮಹಾರಾಷ್ಟ್ರ ಅಗತ್ಯ ಸೇವೆಗಳ ಕಾಯ್ದೆಯನ್ನು ಜಾರಿ ಮಾಡಲು ಸರ್ಕಾರ ಮುಂದಾಗಿದೆ. ಮುಷ್ಕರದಿಂದ ವಿದ್ಯುತ್ ಪೂರೈಕೆಗೆ ಯಾವುದೇ ಧಕ್ಕೆಯಾಗದಂತೆ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸರ್ಕಾರ ಸೂಚನೆ ನೀಡಿದೆ. ಮೂರು ಸರ್ಕಾರಿ ಕಂಪೆನಿಗಳ ಸಾವಿರಾರು ಸಿಬ್ಬಂದಿಗಳು ಸರ್ಕಾರದ ಕ್ರಮಗಳನ್ನು ವಿರೋಧಿಸಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಯೊಂದು ಶಾಖಾ ಕಚೇರಿಯ ಮುಂದೆಯೂ ಪೆಂಡಾಲ್ ಹಾಕಿ ಅಲ್ಲಿ ಧರಣಿ […]