ವಿಧಾನಸೌಧದ ಮುಂಭಾಗ ನೇತಾಜಿ ಪ್ರತಿಮೆ ಮರುಸ್ಥಾಪನೆ : ಸಿಎಂ ಬೊಮ್ಮಾಯಿ

ಬೆಂಗಳೂರು,ಜ.23- ಮೆಟ್ರೋ ಕಾರಣಕ್ಕಾಗಿ ಸ್ಥಳಾಂತರವಾಗಿದ್ದ ಸುಭಾಷ್‍ಚಂದ್ರ ಬೋಸ್ ಪ್ರತಿಮೆಯನ್ನು ಪುನಃ ವಿಧಾನಸೌಧದ ಮುಂಭಾಗ ಮರುಸ್ಥಾಪನೆ ಮಾಡಲು ಕೂಡಲೇ ಸ್ಥಳಾಂತರಕ್ಕೆ ಆದೇಶ ಹೊರಡಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನಾಚಾರಣೆಯ ಅಂಗವಾಗಿ ಅವರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಅವರು, ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನದಂದು ದೇಶ ನಿರ್ಮಿಸಲು ಸಂಕಲ್ಪಿತರಾಗಿ ನಮ್ಮನ್ನು ನಾವು ತೊಡಗಿಸಿಕೊಳ್ಳಬೇಕೆಂದು ಪ್ರತಿಜ್ಞೆ ಮಾಡಿದ್ದೇವೆ. ಅವರ ಹೆಸರಿನಲ್ಲಿಯೇ ದೇಶ ಪ್ರೇಮವಿದೆ ಎಂದು ಹೇಳಿದರು. ನೇತಾಜಿ ಅವರು […]

ಟಿಪ್ಪು ಪ್ರತಿಮೆ ನಿರ್ಮಿಸಿದರೆ ಜನ ಕಾಂಗ್ರೆಸಿಗರನ್ನು ಮನೆಗೆ ಕಳಿಸುತ್ತಾರೆ : ಜೋಷಿ

ಹುಬ್ಬಳ್ಳಿ, ನ.13- ಕಾಂಗ್ರೆಸ್ ನಾಯಕರು ಟಿಪ್ಪು ಸುಲ್ತಾನ್ ಪ್ರತಿಮೆ ನಿರ್ಮಾಣ ಮಾಡಿದರೆ ಜನರು ಅವರನ್ನು ಮನೆಗೆ ಕಳುಹಿಸುತ್ತಾರೆ ಎಂದು ಗಣಿ ಕಲ್ಲಿದ್ದಲು ಹಾಗೂ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಲ್ಹಾದ್ ಜೋಷಿ ಹೇಳಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರಿನಲ್ಲಿ ಟಿಪ್ಪು ಪ್ರತಿಮೆ ವಿಚಾರ ಕುರಿತು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಟಿಪ್ಪು ಪ್ರತಿಮೆ ಮಾಡಲಿ ಅವರನ್ನು ಜನ ಮನೆಗೆ ಕಳಿಸುತ್ತಾರೆ ಎಂದ ಅವರು, ನಾವು ಈಗಲೂ ಟಿಪ್ಪು ಜಯಂತಿಯನ್ನು ವಿರೋಧಿಸುತ್ತೇವೆ ಎಂದರು. ಸರ್ಕಾರದಿಂದ ಟಿಪ್ಪು ಜಯಂತಿ ಮಾಡಬಾರದು […]

ಮೋದಿ ನಾಮಬಲವಿಲ್ಲದೆ ಬಿಜೆಪಿಯವರ ಯೋಗ್ಯತೆಗೆ ಠೇವಣಿ ಕೂಡ ಸಿಗಲ್ಲ : ಜೆಡಿಎಸ್

ಬೆಂಗಳೂರು,ನ.13-ನಾಡಪ್ರಭು ಕೆಂಪೇಗೌಡರ ಪ್ರತಿಮೆ ಅನಾವರಣಕ್ಕೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರನ್ನು ಆಹ್ವಾನಿಸದೆ ರಾಜ್ಯ ಸರ್ಕಾರ ಶಿಷ್ಟಾಚಾರದ ಲೋಪ ಎಸಗಿದ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿ ಉತ್ತರ ನೀಡಬೇಕೇ ಹೊರತು ಬಿಜೆಪಿ ಅಲ್ಲ ಎಂದು ಜೆಡಿಎಸ್ ಮತ್ತೆ ವಾಗ್ದಾಳಿ ಮಾಡಿದೆ. ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಜೆಡಿಎಸ್, ಇಷ್ಟಕ್ಕೂ ಅದು ಕೇಶವಕೃಪದ ಕಾರ್ಯಕ್ರಮವಲ್ಲ. ಬೂಟಾಟಿಕೆ ದಾಸಯ್ಯನಿಗೆ ಮೈಯಲ್ಲಾ ಪಂಗನಾಮ ಎನ್ನುವಂತಿದೆ ಬಿಜೆಪಿ ಪರಿಸ್ಥಿತಿ. ಆಪರೇಷನ್ ಕಮಲವೇ ಅದರ ಶಿಷ್ಟಾಚಾರ, ಸುಳ್ಳಿನ ಪ್ರಚಾರವೇ ಅದರ ಸಂಸ್ಕಾರ ಎಂದು […]

ಕಾರ್ಯಕ್ರಮಕ್ಕೆ ದೇವೇಗೌಡರಿಗಿಲ್ಲ ಆಹ್ವಾನ, ಜೆಡಿಎಸ್ ಆಕ್ರೋಶ

ಬೆಂಗಳೂರು, ನ.11- ನಾಡಪ್ರಭು ಕೆಂಪೇಗೌಡರ ನಂತರ ಬೆಂಗಳೂರು ಅಭಿವೃದ್ಧಿಗೆ ಮಹತ್ತರ ಕೊಡುಗೆ ನೀಡಿದ ಕನ್ನಡ ನೆಲದಿಂದ ಪ್ರಧಾನಿಯಾಗಿದ್ದ ಏಕೈಕ ಕನ್ನಡಿಗರಾದ ಎಚ್.ಡಿ.ದೇವೇಗೌಡ ಅವರನ್ನು ನಾಡಪ್ರಭು ಕೆಂಪೇಗೌಡರ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮಕ್ಕೆ ರಾಜ್ಯ ಸರ್ಕಾರವು ಆಹ್ವಾನ ಮಾಡದಿರುವುದು ಸಮಸ್ತ ಕನ್ನಡಿಗರಿಗೆ ಮಾಡಿದ ಅಪಮಾನ ಎಂದು ಜೆಡಿಎಸ್ ಆರೋಪಿಸಿದೆ. ಈ ಸಂಬಂಧ ಸರಣಿ ಟ್ವಿಟ್ ಮಾಡಿರುವ ಜೆಡಿಎಸ್, ನಾಡಪ್ರಭುಗಳ ಪ್ರತಿಮೆ ಸ್ಥಾಪನೆಯ ಕಾಮಗಾರಿಗೆ ಅಡಿಗಲ್ಲು ಹಾಕುವ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿಗಳನ್ನು ಆಹ್ವಾನಿಸಿದ ಬಿಜೆಪಿ ಸರ್ಕಾರ, ಅದೇ ಪ್ರಧಾನಿಗಳಿಂದ ಪ್ರತಿಮೆ ಲೋಕಾರ್ಪಣೆ […]

ಕುಲ ಕುಲವೆಂದು ಹೊಡೆದಾಡದಿರಿ : ಮೋದಿ ಭಾಷಣದ ಹೈಲೈಟ್ಸ್

ಬೆಂಗಳೂರು,ನ.11-ಡಬಲ್ ಇಂಜಿನ್ ಸರ್ಕಾರದಿಂದ ನವಭಾರತ ನಿರ್ಮಾಣ ಮತ್ತಷ್ಟು ಬಲಿಷ್ಠಗೊಳ್ಳಲಿದೆ ಎಂದು ಪ್ರಧಾನಿ ನರೇಂದ್ರಮೋದಿ ಪ್ರತಿಪಾದಿಸಿದ್ದಾರೆ. ಬೆಂಗಳೂರಿಗೆ ಆಗಮಿಸಿದ ಅವರು ಹಲವು ಅಭಿವೃದ್ಧಿ ಕಾಮಗಾರಿಗಳಲ್ಲಿ ಭಾಗವಹಿಸಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಕೆಂಪೇಗೌಡರ ಪ್ರಗತಿ ಪ್ರತಿಮೆ ಅನಾವರಣದ ಮೂಲಕ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದರು. ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ,ಇಂದು ರಾಜ್ಯ ಮತು ರಾಷ್ಟ್ರಕ್ಕೆ ಉತ್ತಮ ಸಂದೇಶ ನೀಡಿದ ಕನಕದಾಸರು, ಒನಕೆ ಓಬವ್ವ ಅವರ ಜನ್ಮದಿನವಾದ ಇಂದು ರಾಜ್ಯಕ್ಕೆ ಭೇಟಿ ನೀಡಿರುವುದು ಹೆಚ್ಚು ಸಂತಸ ನೀಡಿದೆ ಎಂದರು. ಕನಕದಾಸರು […]

ನಾಡಪ್ರಭು ಕೆಂಪೇಗೌಡರ ಪ್ರತಿಮೆ ಲೋಕಾರ್ಪಣೆಗೆ ಭರದ ಸಿದ್ಧತೆ

ಬೆಂಗಳೂರು,ನ.8- ಇದೇ 11ರಂದು ನಗರದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ನಿರ್ಮಾಣವಾಗಿರುವ 108 ಅಡಿ ಎತ್ತರದ ನಾಡಪ್ರಭು ಕೆಂಪೇಗೌಡ ಅವರ ಪ್ರತಿಮೆ ಅನಾವರಣಗೊಳ್ಳಲಿದೆ. ಕೆಂಪೇಗೌಡ ಅವರ ಇತಿಹಾಸ, ಸಾಧನೆ ಮತ್ತು ಪರಂಪರೆಯನ್ನು ಸಾರುವ ಆಕರ್ಷಕ ಕೆಂಪೇಗೌಡ ಥೀಮ್ ಪಾರ್ಕ್ ಕೂಡಾ ಅಂದೇ ಲೋಕಾರ್ಪಣೆಗೊಳ್ಳುತ್ತಿದೆ. ಥೀಮ್ ಪಾರ್ಕ್ ಸ್ಥಾಪನೆಗೆ ಸರಕಾರವು 30 ಕೋಟಿ ವಿನಿಯೋಗಿಸುತ್ತಿದೆ. 23 ಎಕರೆಯಲ್ಲಿ ಹೆರಿಟೇಜ್ ಪಾರ್ಕ್ ನಿರ್ಮಾಣವಾಗಿದೆ. 64 ಕೋಟಿ ರೂ. ವೆಚ್ಚದಲ್ಲಿ ಪ್ರತಿಮೆಯನ್ನು ಸ್ಥಾಪಿಸಲಾಗಿದ್ದು, ಕಂಚಿನ ಪ್ರತಿಮೆಯ ಭಾಗವಾದ ಖಡ್ಗ 4 […]

ಸಂಸತ್ ಆವರಣದಲ್ಲಿ ಕೆಂಪೇಗೌಡರ ಪ್ರತಿಮೆ ಸ್ಥಾಪಿಸಲು ಎಚ್‍ಡಿಡಿ ಪತ್ರ

ಬೆಂಗಳೂರು,ನ.7- ನವದೆಹಲಿಯ ಸಂಸತ್ ಭವನದ ಆವರಣದಲ್ಲಿ ನಾಡಪ್ರಭು ಕೆಂಪೇಗೌಡರ ಕಂಚಿನ ಪ್ರತಿಮೆ ಸ್ಥಾಪಿಸಲು ಸೂಕ್ತ ಕ್ರಮಕೈಗೊಳ್ಳುವಂತೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ದೇವನಹಳ್ಳಿಯ ನಾಡಪ್ರಭು ಕೆಂಪೇಗೌಡರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ 108 ಅಡಿ ಎತ್ತರದ ಕಂಚಿನ ಪ್ರತಿಮೆ ಲೋಕಾರ್ಪಣೆಗೊಳ್ಳುತ್ತಿರುವ ಸಂದರ್ಭದಲ್ಲಿ ಬೆಂಗಳೂರು ಸಂಸ್ಥಾಪಕ ಕೆಂಪೇಗೌಡರ ಕೇಂದ್ರ ಸಮಿತಿಯು ಸಂಸತ್‍ಭವನದ ಆವರಣದಲ್ಲಿ ಕೆಂಪೇಗೌಡರ ಪ್ರತಿ ಸ್ಥಾಪಿಸಬೇಕೆಂದು ಮನವಿ ಮಾಡಿದೆ. ಸಮಿತಿಯ ಮನವಿ ಪತ್ರವನ್ನು ಲಗತ್ತಿಸಿ ಗೌಡರು ಪ್ರಧಾನಿಗೆ ಪತ್ರ ಬರೆದಿದ್ದಾರೆ. […]

ಕೆಂಪೇಗೌಡ ಪ್ರತಿಮೆ ಅನಾವರಣದ ಮೂಲಕ ಶಕ್ತಿ ಪ್ರದರ್ಶನಕ್ಕೆ ಬಿಜೆಪಿ ಸಜ್ಜು.

ಬೆಂಗಳೂರು,ಅ.21- ನಾಡಪ್ರಭು ಹಾಗೂ ಬೆಂಗಳೂರು ನಿರ್ಮಾತೃ ಕೆಂಪೇಗೌಡ ಪ್ರತಿಮೆ ಅನಾವರಣದ ಕಾರ್ಯಕ್ರಮವನ್ನು ರಾಜಕೀಯ ಸಮಾವೇಶವನ್ನಾಗಿ ಪರಿವರ್ತಿಸಲು ಆಡಳಿತಾರೂಢ ಬಿಜೆಪಿ ಭಾರೀ ಕಾರ್ಯತಂತ್ರ ರೂಪಿಸಿದೆ. ಈ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ನಳೀನ್‍ಕುಮಾರ್ ಕಟೀಲ್, ಸಚಿವರಾದ ಅಶ್ವಥ್‍ನಾರಾಯಣ, ಕೆ.ಗೋಪಾಲಯ್ಯ, ನಾರಾಯಣ ಗೌಡ, ಡಾ.ಕೆ.ಸುಧಾಕರ್, ಎಸ್.ಟಿ.ಸೋಮಶೇಖರ್ ಸೇರಿದಂತೆ ಒಕ್ಕಲಿಗ ಸಮುದಾಯದ ಪ್ರಮುಖರ ಜೊತೆ ಮಾತುಕತೆ ನಡೆಸಿದ್ದಾರೆ. ನ.11ರಂದು ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ನಿರ್ಮಿಸಿರುವ 108 ಅಡಿ ಎತ್ತರದ […]

ಕೆಂಪೇಗೌಡ ಪ್ರತಿಮೆ ಲೋಕಾರ್ಪಣೆ ಯಶಸ್ವಿಗೆ ಒಕ್ಕಲಿಗರ ಸಂಘ ಮನವಿ

ಬೆಂಗಳೂರು, ಅ.21-ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆಯ ಲೋಕಾರ್ಪಣೆ ಸಮಾರಂಭದಲ್ಲಿ ನಮ್ಮ ಸಮಾಜದವರು, ವಿವಿಧ ಸಂಘಟನೆಗಳು ಸೇರಿದಂತೆ ನಾಡಿನ ಸಮಸ್ತರು ಪಾಲ್ಗೊಂಡು ಯಶಸ್ವಿಗೊಳಿಸುವಂತೆ ರಾಜ್ಯ ಒಕ್ಕಲಿಗರ ಸಂಘ ಮನವಿ ಮಾಡಿದೆ. ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ ಬೃಹತ್ ಕಂಚಿನ ಪ್ರತಿಮೆಯನ್ನು ವಿಮಾನ ನಿಲ್ದಾಣದಲ್ಲಿ ನಿರ್ಮಿಸಿರುವುದು ಎಲ್ಲರೂ ಹೆಮ್ಮೆಪಡುವ ಸಂಗತಿಯಾಗಿದೆ. ಈ ಸಮಾರಂಭದಲ್ಲಿ ಪಾಲ್ಗೊಳ್ಳುವ ಮೂಲಕ ನಾಡಪ್ರಭುಗೆ ಗೌರವ ಸಲ್ಲಿಸುವ ಸದಾವಕಾಶ ದೊರೆತಿದೆ ಎಂದು ಸಂಘದ ಅಧ್ಯಕ್ಷರಾದ ಶಾಸಕ ಸಿ.ಎನ್.ಬಾಲಕೃಷ್ಣ […]

ಧೂಳು ಹಿಡಿದಿದ್ದ ಗಾಂಧಿ ಪ್ರತಿಮೆ ಶುಚಿಗೊಳಿಸಿದ ಬಿಹಾರ ಡಿಸಿಎಂ

ನವದೆಹಲಿ,ಅ.2- ಲಂಡನ್‍ನಲ್ಲಿ ಬಿಹಾರದ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರು ಧೂಳು ಹಿಡಿದಿದ್ದ ಗಾಂಧಿ ಪ್ರತಿಮೆಯನ್ನು ತಮ್ಮ ಕರವಸ್ತ್ರದಿಂದ ಶುಚಿಗೊಳಿಸಿರುವ ವಿಡಿಯೋ ಇದೀಗ ಎಲ್ಲೇಡೆ ವೈರಲ್ ಆಗಿದೆ. ಕಳೆದ ತಿಂಗಳು ಲಂಡನ್‍ನಲ್ಲಿರುವ ಬ್ರಿಟಿಷ್ ಸಂಸತ್ತಿಗೆ ಭೇಟಿ ನೀಡಿದ್ದ ತೇಜಸ್ವಿ ಅವರು ಗಾಂಧಿ ಪ್ರತಿಮೆ ಮೇಲೆ ಇದ್ದ ಧೂಳನ್ನು ತಮ್ಮ ಕರವಸ್ತ್ರದಿಂದ ಶುಚಿಗೊಳಿಸುತ್ತಿರುವ ವಿಡಿಯೋ ತುಣಕನ್ನು ಆರ್‍ಜೆಡಿ ಶಾಸಕರೊಬ್ಬರು ಟ್ವಿಟ್ಟರ್‍ನಲ್ಲಿ ಹಂಚಿಕೊಂಡಿದ್ದಾರೆ. ರಾಷ್ಟ್ರಪಿತನ ಐತಿಹಾಸಿಕ ಕಂಚಿನ ಪ್ರತಿಮೆಗೆ ಮಾಲಾರ್ಪಣೆ ಮಾಡಲು ಹೋದಾಗ . ಅದರ ಮೇಲಿದ್ದ ಧೂಳನ್ನು ಕಂಡ ತೇಜಸ್ವಿ […]