ಬಸವಣ್ಣ, ಕೆಂಪೇಗೌಡ ಪ್ರತಿಮೆ ಅನಾವರಣ

ಬೆಂಗಳೂರು,ಮಾ.26- ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆ ವಿವಿಧ ಸಮುದಾಯಗಳನ್ನು ಓಲೈಸಿಕೊಳ್ಳಲು ಮುಂದಾಗಿರುವ ಬಿಜೆಪಿ ಇಂದು ಒಂದೇ ದಿನ ಏಕಕಾಲಕ್ಕೆ ಮೂರು ಪ್ರತಿಮೆಗಳನ್ನು ಅನಾವರಣಗೊಳಿಸಿದೆ. ಆಡಳಿತ ಶಕ್ತಿಕೇಂದ್ರ ವಿಧಾನಸೌಧ ಮುಂಭಾಗ ನಿರ್ಮಾಣ ಮಾಡಿರುವ 12ನೇ ಶತಮಾನದ ಸಮಾಜ ಸುಧಾರಕ ಬಸವಣ್ಣ, ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡ ಅವರ ಪುತ್ಥಳಿಯನ್ನು ಅನಾವರಣ ಮಾಡಲಾಯಿತು.ಕೇಂದ್ರ ಗೃಹ ಸಚಿವ ಅಮಿತ್ ಷಾ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮೀಜಿ, ಉಡುಪಿ ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನ […]
ಮತದಾರರ ಓಲೈಕೆಗೆ ಪ್ರತಿಮೆಗಳ ಹಿಂದೆ ಬಿದ್ದ ಸಿಎಂ ಬೊಮ್ಮಾಯಿ

ಬೆಂಗಳೂರು, ಮಾ.18- ವಿಧಾನಸಭಾ ಚುನಾವಣೆಗೆ ಮುನ್ನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಪ್ರತಿಮೆ ಅನಾವರಣ ಮೂಲಕ ಮತದಾರರ ಗಮನ ಸೆಳೆಯಲು ನೋಡುತ್ತಿದೆ. ಕಳೆದ ಕೆಲವು ತಿಂಗಳುಗಳಲ್ಲಿ ಸಿಎಂ ವಿವಿಧ ಜಿಲ್ಲೆಗಳಲ್ಲಿ ಕನಿಷ್ಠ 15 ಪ್ರತಿಮೆಗಳನ್ನು ಅನಾವರಣಗೊಳಿಸಿದ್ದಾರೆ. ಮಾದರಿ ನೀತಿ ಸಂಹಿತೆ ಜಾರಿಯಾಗುವ ಮುನ್ನವೇ ಬೊಮ್ಮಾಯಿ ಇನ್ನಷ್ಟು ಪ್ರತಿಮೆಗಳನ್ನು ಅನಾವರಣಗೊಳಿಸುವ ಆತುರ ತೋರುತ್ತಿದ್ದಾರೆ. ಮಾರ್ಚ್ ತಿಂಗಳಲ್ಲಿಯೇ ಅವರು ಕನಿಷ್ಠ ಏಳು ಪ್ರತಿಮೆಗಳನ್ನು ಅನಾವರಣಗೊಳಿಸಲಿದ್ದಾರೆ. ಪ್ರತಿಯೊಂದು ಪ್ರತಿಮೆಯು ಒಂದು ನಿರ್ದಿಷ್ಟ ಜಜಾತಿ ಅಥವಾ ಪ್ರದೇಶವನ್ನು ಪ್ರತಿನಿಧಿಸುತ್ತದೆ ಮತ್ತು […]
ಮಾ.24ಕ್ಕೆ ಬಸವಣ್ಣ-ಕೆಂಪೇಗೌಡರ ಪ್ರತಿಮೆ ಅನಾವರಣ

ಬೆಂಗಳೂರು,ಮಾ.9- ವಿಧಾನ ಸೌಧದ ಮುಂದೆ ನೂತನವಾಗಿ ನಿರ್ಮಾಣಗೊಂಡಿರುವ ಕಾಯಕಯೋಗಿ ಜಗಜ್ಯೋತಿ ಶ್ರೀ ಬಸವೇಶ್ವರ ಹಾಗೂ ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ ಪ್ರತಿಮೆಗಳು ಇದೇ 24ರಂದು ಅನಾವರಣಗೊಳ್ಳಲಿದೆ. ಕೇಂದ್ರ ಗೃಹಸಚಿವ ಅಮಿತ್ ಷಾ ಅವರು ಅಂದು ಎರಡು ಪ್ರತಿಮೆಗಳನ್ನು ಲೋಕಾರ್ಪಣೆ ಮಾಡಲಿದ್ದಾರೆ. ಚುನಾವಣಾ ನೀತಿ ಸಂಹಿತೆ ಜಾರಿಯಾಗುವ ಮೊದಲೇ ಉದ್ಘಾಟನೆ ಮಾಡಲು ಸರ್ಕಾರ ಸಿದ್ದತೆ ನಡೆಸಿದೆ. ಕೇಂದ್ರ ಚುನಾವಣಾ ಆಯೋಗ ವಿಧಾನಸಭೆ ಚುನಾವಣೆಗೆ ದಿನಾಂಕವನ್ನು ಘೋಷಣೆ ಮಾಡಿದರೆ ನಂತರ ಆಯೋಗದ ಅನುಮತಿ ಪಡೆದು ಉದ್ಘಾಟಿಸಬೇಕಾಗುತ್ತದೆ. ಅದಕ್ಕೂ ಮೊದಲೇ ಸಿದ್ದಗೊಂಡಿರುವ […]
ವಿಧಾನಸೌಧ ಎದುರು ಬಸವಣ್ಣ, ಕೆಂಪೇಗೌಡರ ಪ್ರತಿಮೆ ನಿರ್ಮಾಣಕ್ಕೆ ಶಂಕುಸ್ಥಾಪನೆ

ಬೆಂಗಳೂರು,ಜ.13- ಆಡಳಿತ ಶಕ್ತಿಕೇಂದ್ರ ವಿಧಾನಸೌಧದ ಮುಂಭಾಗದಲ್ಲಿ ಬಹುನಿರೀಕ್ಷಿತ ನಾಡಪ್ರಭು ಕೆಂಪೇಗೌಡ ಹಾಗೂ ಕಾಯಕಯೋಗಿ ಬಸವಣ್ಣನವರ ಪ್ರತಿಮೆ ನಿರ್ಮಾಣಕ್ಕೆ ಇಂದು ಶಂಕುಸ್ಥಾಪನೆ ನೆರವೇರಿಸಲಾಯಿತು. ರಾಷ್ಟ್ರಪಿತ ಮಹಾತ್ಮ ಗಾಂಯವರ ಪ್ರತಿಮೆ ಪಕ್ಕ ಸುಮಾರು 8 ಕೋಟಿ ವೆಚ್ಚದಲ್ಲಿ ಸರ್ಕಾರ ಈ ಪ್ರತಿಮೆಗಳನ್ನು ನಿರ್ಮಾಣ ಮಾಡುತ್ತಿದ್ದು, ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆಯಾಗುವ ಮೊದಲೇ ಪ್ರತಿಮೆಗಳನ್ನು ಉದ್ಘಾಟಿಸುವ ಲೆಕ್ಕಾಚಾರದಲ್ಲಿ ಸರ್ಕಾರವಿದೆ. ಕಳೆದ ತಿಂಗಳು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಮೀಪ ನಾಡಪ್ರಭು ಕೆಂಪೇಗೌಡರ 108 ಅಡಿ ಪ್ರತಿಮೆಯನ್ನು ಪ್ರಧಾನಿ ನರೇಂದ್ರಮೋದಿ ಅವರು ಉದ್ಘಾಟಿಸಿದ್ದರು. […]
ವಿಧಾನಸೌಧದೆದುರು ಬಸವಣ್ಣ, ಕೆಂಪೇಗೌಡರ ಪ್ರತಿಮೆ ನಿರ್ಮಾಣಕ್ಕೆ ಜ.13 ರಂದು ಶಂಕುಸ್ಥಾಪನೆ

ಬೆಂಗಳೂರು,ಜ.10- ಆಡಳಿತ ಶಕ್ತಿ ಕೇಂದ್ರ ವಿಧಾನಸೌಧ ಮುಂಭಾಗ ನೂತನವಾಗಿ ನಿರ್ಮಾಣ ಮಾಡಲು ಉದ್ದೇಶಿಸಿರುವ ನಾಡಪ್ರಭು ಕೆಂಪೇಗೌಡ ಹಾಗೂ ಕಾಯಕಯೋಗಿ ಬಸವಣ್ಣನವರ ಪ್ರತಿಮೆಗೆ ಇದೇ 13ರಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ವಿಧಾನಸೌಧದ ಮುಂಭಾಗದಲ್ಲಿ ಈ ಎರಡೂ ಪ್ರತಿಮೆಗಳನ್ನು ನಿರ್ಮಿಸಲಾಗುತ್ತಿದ್ದು, 13ರಂದು ಮುಖ್ಯಮಂತ್ರಿ ಬೊಮ್ಮಾಯಿ ಶಂಕುಸ್ಥಾಪನೆ ನೆರವೇರಿಸಿ ಆದಷ್ಟು ಶೀಘ್ರ ಉದ್ಘಾಟನಾ ಕಾರ್ಯಕ್ರಮವು ನೆರವೇರಲಿದೆ. ಬಸವಣ್ಣ ಮತ್ತು ಕೆಂಪೇಗೌಡರ ಪ್ರತಿಮೆಗಳನ್ನು ಅಶ್ವಾರೂಢ ಮಾದರಿಯಲ್ಲಿ ನಿರ್ಮಾಣ ಮಾಡಲಾಗುತ್ತಿದೆ. ಲೋಕೋಪಯೋಗಿ ಇಲಾಖೆ ವತಿಯಿಂದ ನಿರ್ಮಿಸಲಾಗುತ್ತಿದ್ದು, ಸಚಿವರಾದ ಆರ್.ಅಶೋಕ್ ಮತ್ತು […]