ಪಿ.ಎಸ್.ಐ ನೇಮಕಾತಿಗೆ ತಡೆ : ಗೃಹ ಸಚಿವ ಆರಗ ಜ್ಞಾನೇಂದ್ರ
ಕಲಬುರಗಿ.ಫೆ.19- ಕಲ್ಯಾಣ ಕರ್ನಾಟಕ ಭಾಗದ ಅಭ್ಯರ್ಥಿಗಳಿಗೆ ಪಿ.ಎಸ್.ಐ. ನೇಮಕಾತಿಯಲ್ಲಿ ಅನ್ಯಾಯವಾಗಿದೆ ಎಂಬ ಜನಪ್ರತಿನಿಧಗಳ ಒತ್ತಾಯದ ಮೇರೆಗೆ ಪ್ರಸ್ತುತ ನೇಮಕಾತಿಗೆ ತಡೆ ನೀಡಲಾಗಿದ್ದು, ಈ ಕುರಿತು ಅಧ್ಯಯನಕ್ಕೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕ ಭಾಗದ ಅಭ್ಯರ್ಥಿಗಳಿಗೆ ತೊಂದರೆಯಾಗದಂತೆ 371ಜೆ ವಿಶೇಷ ವಿಶೇಷ ಸ್ಥಾನಮಾನದ ಕಾಯ್ದೆ ಮತ್ತು ಆದೇಶಗಳನ್ನು ಸಂಪೂರ್ಣವಾಗಿ ಅಧ್ಯಯನ ಮಾಡಲು ಸಮಿತಿಗೆ ನಿರ್ದೇಶನ ನೀಡಲಾಗಿದೆ. ಸಮಿತಿಯಲ್ಲಿ ಗೃಹ ಸಚಿವಾಲಯದ […]