ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರಿದ ಮಾಜಿ ಶಾಸಕ ಎಸ್.ತಿಪ್ಪೇಸ್ವಾಮಿ

ಬೆಂಗಳೂರು,ಫೆ.26-ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ಖಾತರಿಯಾದ ಹಿನ್ನಲೆಯಲ್ಲಿ ಮಾಜಿ ಶಾಸಕ ಎಸ್.ತಿಪ್ಪೇಸ್ವಾಮಿ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲ್ಲೂಕಿನ ನಾಯಕನಹಟ್ಟಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ತಿಪ್ಪೇಸ್ವಾಮಿ ಹಾಗೂ ಅವರ ಬೆಂಬಲಿಗರು ಕಾಂಗ್ರೆಸ್‍ಗೆ ಗುಡ್‍ಬೈ ಹೇಳಿ ಸಾರಿಗೆ ಸಚಿವ ಶ್ರೀರಾಮುಲು ಹಾಗೂ ಶಾಸಕ ತಿಪ್ಪಾರೆಡ್ಡಿ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾದರು. ಪಕ್ಷದ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇಸರಿ ಶಾಲು ಹೊದಿಸಿ ಪಕ್ಷದ ಬಾವುಟ ನೀಡಿ ಶ್ರೀರಾಮುಲು ಮತ್ತು ತಿಪ್ಪಾರೆಡ್ಡಿ ಆತ್ಮೀಯವಾಗಿ ಬರಮಾಡಿಕೊಂಡರು. ಮೂಲಗಳ ಪ್ರಕಾರ […]