ಅಪ್ಪು ಸಾಧನೆ ಪಠ್ಯವಾಗಲಿ : ಅಭಿಮಾನಿಗಳ ಆಗ್ರಹ

ಬೆಂಗಳೂರು,ಅ.29- ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರ ಜೀವನ ಸಾಧನೆಯನ್ನು ಪಠ್ಯ ಪುಸ್ತಕದಲ್ಲಿ ಅಳವಡಿಸುವಂತೆ ಅವರ ಅಭಿಮಾನಿಗಳು ಒತ್ತಾಯಿಸಿದ್ದಾರೆ. ಈ ಕುರಿತಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಟಿ ನರಸೀಪುರದ ಮುಡುಕು ತೊರೆಯ ಅಪ್ಪು ಅಭಿಮಾನಿಗಳು ಮನವಿ ಮಾಡಿಕೊಂಡಿದ್ದಾರೆ. ಇಂದು ಆರ್.ಟಿ.ನಗರದಲ್ಲಿರುವ ಬೊಮ್ಮಾಯಿ ಅವರ ನಿವಾಸಕ್ಕೆ ಆಗಮಿಸಿ ಸಿಎಂಗೆ ಮನವಿ ಸಲ್ಲಿಸಿದ್ದೇವೆ ಎಂದು ಅಪ್ಪು ಅಭಿಮಾನಿಗಳ ಸಂಘದ ದೇವರಾಜ ಅರಸು ತಿಳಿಸಿದರು. ನಾವು ಈಗಾಗಲೇ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೂ ಮನವಿ […]