ಹುಬ್ಬಳ್ಳಿಗೆ ಅಮಿತ್ ಷಾ: ಚುನಾವಣೆ ಕಾರ್ಯತಂತ್ರಕ್ಕೆ ಸರಣಿ ಸಭೆ

ಬೆಂಗಳೂರು,ಜ.27- ಕಲ್ಯಾಣ ಕರ್ನಾಟಕದಲ್ಲಿ ಪಕ್ಷವನ್ನು ಮತ್ತಷ್ಟು ಭದ್ರಪಡಿಸಿ ಕಾರ್ಯಕರ್ತರ ಉತ್ಸಾಹವನ್ನು ಇಮ್ಮಡಿಗೊಳಿಸಲು ಕೇಂದ್ರ ಗೃಹಸಚಿವ ಅಮಿತ್ ಷಾ ಸಂಜೆ ವಾಣಿಜ್ಯ ನಗರಿ ಹುಬ್ಬಳ್ಳಿಗೆ ಆಗಮಿಸಲಿದ್ದಾರೆ. ತಮ್ಮ ಎರಡು ದಿನಗಳ ರಾಜ್ಯ ಪ್ರವಾಸದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ರಾಜ್ಯಾಧ್ಯಕ್ಷ ನಳೀನ್‍ಕುಮಾರ್ ಕಟೀಲ್, ಸಚಿವರು ಮತ್ತಿತರರನ್ನು ಭೇಟಿಯಾಗಿ ಚುನಾವಣೆಗೆ ಕಾರ್ಯತಂತ್ರಗಳನ್ನು ರೂಪಿಸಲಿದ್ದಾರೆ. ಕೆಲ ದಿನಗಳ ಹಿಂದೆ ರಾಜ್ಯಕ್ಕೆ ಭೇಟಿ ಕೊಟ್ಟಿದ್ದ ಅಮಿತ್ ಷಾ ಮಂಡ್ಯ ಮತ್ತು ಬೆಂಗಳೂರಿನಲ್ಲಿ ಪ್ರತ್ಯೇಕವಾಗಿ ಸಭೆ ನಡೆಸುವ ಮೂಲಕ ಕಾರ್ಯಕರ್ತರಲ್ಲಿ […]

ಕಾಂಗ್ರೆಸ್-ಜೆಡಿಎಸ್‍ಗೆ ಸೆಡ್ಡು ಹೊಡೆಯಲು ಬಿಜೆಪಿ ರಣತಂತ್ರ

ಬೆಂಗಳೂರು, ಜ.11- ರಾಜ್ಯದಲ್ಲಿ ಶತಾಯಗತಾಯ ಅಧಿಕಾರ ಹಿಡಿಯಲೇಬೇಕೆಂದು ಮುಂದಾಗಿರುವ ಬಿಜೆಪಿ ಕಾಂಗ್ರೆಸ್ ಮತ್ತು ಜೆಡಿಎಸ್‍ಗೆ ಠಕ್ಕರ್ ಕೊಡುವ ರೀತಿಯಲ್ಲಿ ಸದ್ದಿಲ್ಲದೆ ಒಳಗೊಳಗೆ ಕಾರ್ಯತಂತ್ರ ಹೆಣೆಯಲು ಮುಂದಾಗಿದೆ. ಒಂದು ಕಡೆ ಪ್ರಧಾನಿ ನರೇಂದ್ರಮೋದಿ ಅವರು ನಾಳೆ ರಾಜ್ಯಕ್ಕೆ ಭೇಟಿ ನೀಡುತ್ತಿದ್ದರೆ 19ರಂದು ಮತ್ತೆ ಕಲ್ಬುರ್ಗಿಗೆ ಆಗಮಿಸಲಿದ್ದಾರೆ. ಈ ತಿಂಗಳ ಅಂತ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಷಾ, ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೂಡ ದಾಂಗುಡಿ ಇಡಲಿದ್ದಾರೆ. ಫೆ.17ಕ್ಕೆ ಹಣಕಾಸು ಖಾತೆಯನ್ನ ಹೊಂದಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು […]

ದಕ್ಷಿಣದಲ್ಲಿ ಕಮಲ ಅರಳಿಸಲು ಮೋದಿ, ಶಾ ಮಾಸ್ಟರ್ ಪ್ಲಾನ್

ಬೆಂಗಳೂರು,ಜ.2-ರಾಜ್ಯದಲ್ಲಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಲು ತರಹೇವಾರಿ ತಂತ್ರಗಾರಿಕೆ ರೂಪಿಸಿರುವ ಬಿಜೆಪಿಗೆ ಕಾಂಗ್ರೆಸ್ ಮತ್ತು ಜೆಡಿಎಸ್ ಪ್ರಬಲ ಎದುರಾಳಿಯಾಗಿದ್ದು, ಇವೆರಡೂ ಪಕ್ಷಗಳ ಮತ ಬ್ಯಾಂಕ್ ಕಬಳಿಸಲು ಪ್ರಧಾನಿ ನರೇಂದ್ರ ಮೋದಿ – ಅಮಿತ್ ಶಾ ಜೋಡಿ ಹಲವು ಯೋಜನೆ ಸಿದ್ಧಪಡಿಸಿಟ್ಟುಕೊಂಡಿದೆ. ವಿಧಾನಸಭೆ ಚುನಾವಣೆ ವೇಳಾಪಟ್ಟಿ ಘೋಷಣೆಗೆ ಮುನ್ನವೇ ಹಲವಾರು ಸರ್ಕಾರಿ ಕಾರ್ಯಕ್ರಮಗಳಿಗೆ ಅನುಮೋದನೆ ನೀಡಿ ಮತದಾರರ ಮನಗೆಲ್ಲುವುದು, ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ ಅದರ ಪ್ರಯೋಜನಗಳನ್ನು ಜನತೆಗೆ ತಲುಪಿಸುವುದು. ರಾಜ್ಯದ ಹಲವೆಡೆ ಪಕ್ಷದಿಂದ ರ್ಯಾಲಿಗಳನ್ನು ನಡೆಸಿ ಬಿಜೆಪಿ ಕಾರ್ಯಕರ್ತರಲ್ಲಿ […]

ಬಿಜೆಪಿ ಚುನಾವಣ ರಣತಂತ್ರ: ಮೋದಿ ರ‍್ಯಾಲಿಗಳಿಗೆ ಸಿದ್ಧತೆ

ಬೆಂಗಳೂರು,ಡಿ.12- ವಿಧಾನಸಭಾ ಚುನಾವಣೆಗೆ ಪೂರ್ವಭಾವಿಯಾಗಿ ರಾಜ್ಯ ಬಿಜೆಪಿ, ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ಗೃಹಸಚಿವ ಅಮಿತ್ ಶಾ, ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರಿಂದ ರಾಜ್ಯಾದ್ಯಂತ ಸಾರ್ವಜನಿಕ ಸರಣಿ ರ‍್ಯಾಲಿಗಳನ್ನು ನಡೆಸಲು ಸಿದ್ಧತೆ ನಡೆಸಿದೆ. ಜನವರಿ ತಿಂಗಳಿನಲ್ಲಿ ಬೆಳಗಾವಿಯಲ್ಲಿ ನಡೆಯಲಿರುವ ರೈತ ಮೋರ್ಚಾ ಸಮಾವೇಶದಲ್ಲಿ ಪ್ರಧಾನಿ ಮೋದಿ ಭಾಗವಹಿಸುವ ನಿರೀಕ್ಷೆಯಿದೆ. ಇನ್ನು ಅಮಿತ್ ಶಾ ಅವರು ಚಿತ್ರದುರ್ಗದಲ್ಲಿ ಎಸ್‍ಸಿ ಮೋರ್ಚಾಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ, ಇದೇ ಸಂದರ್ಭದಲ್ಲಿ ಪ್ರತಿಪಕ್ಷ ಕಾಂಗ್ರೆಸ್ ಕೂಡ ಜನವರಿ […]

ಚುನಾವಣಾ ರಣತಂತ್ರ ರೂಪಿಸಲು ಕಾಂಗ್ರೆಸ್ ಸಭೆ

ಬೆಂಗಳೂರು,ಡಿ.9- ಗುಜರಾತ್ ಸೋಲು, ಹಿಮಾಚಲ ಪ್ರದೇಶ ಗೆಲುವಿನ ಬಳಿಕ ಕರ್ನಾಟಕದಲ್ಲಿ ಅನುಸರಿಸಬೇಕಾದ ರಣತಂತ್ರದ ಬಗ್ಗೆ ಕಾಂಗ್ರೆಸ್ ನಾಯಕರು ಶೀಘ್ರ ಸಭೆ ನಡೆಸಿ ಚರ್ಚೆ ನಡೆಸಲಿದ್ದಾರೆ. ಕಾಂಗ್ರೆಸ್‍ನಲ್ಲಿ ಕೆಲವರು ಬಿಜೆಪಿ ಸರ್ಕಾರ ವಿರುದ್ಧ ಆಕ್ರಮಣಕಾರಿ ಪ್ರಚಾರ ಮತ್ತು ತಂತ್ರಗಾರಿಕೆ ಅನುಸರಿಸಬೇಕೆಂಬ ಅಭಿಪ್ರಾಯ ಹೊಂದಿದ್ದಾರೆ. ಆದರೆ, ಏನನ್ನೂ ಮಾಡದೆ ತಟಸ್ಥವಾಗಿ ಉಳಿದಿದ್ದೇ ಆದರೆ ಮುಂದಿನ ಚುನಾವಣೆಯಲ್ಲಿ ಯಶಸ್ಸು ಗಳಿಸಲು ಸಾಧ್ಯ. ಹಾಗಾಗಿ ತಟಸ್ಥ ನೀತಿ ಅನುಸರಿಸುವುದು ಸೂಕ್ತ ಎಂಬ ಪ್ರತಿಪಾದನೆ ಮಾಡುತ್ತಿದ್ದಾರೆ. ಎರಡು ವಿಧಾನಭೆ ಚುನಾವಣೆ ಪೈಕಿ ಗುಜರಾತ್‍ನಲ್ಲಿ ಕಾಂಗ್ರೆಸ್ […]

ಸಿದ್ಧಾಂತ ಮರೆತವರಿಗೆ ಬಿಸಿ ಮುಟ್ಟಿಸಲು ವ್ಯೂಹ ರಚಿಸಿದ ಕಾಂಗ್ರೆಸ್

ಬೆಂಗಳೂರು,ಡಿ.7- ರಾಜ್ಯ ಕಾಂಗ್ರೆಸ್‍ನಲ್ಲಿ ನಾಯಕತ್ವದ ಗೊಂದಲ ಸೃಷ್ಟಿಸಿ, ವ್ಯಕ್ತಿಪೂಜೆ ಮಾಡಿದ ನಾಯಕರಿಗೆ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಮೊದಲ ಹಂತದ ಟಿಕೆಟ್ ಘೋಷಣೆ ವೇಳೆ ಕೈ ಕೊಡಲು ಕಾಂಗ್ರೆಸ್ ನಾಯಕರು ಚಿಂತನೆ ನಡೆಸಿದ್ದಾರೆ. ರಾಜ್ಯದಲ್ಲಿ ಬಹಳಷ್ಟು ಮಂದಿ 2ನೇ ಹಂತದ ಮುಖಂಡರು ಪಕ್ಷ ಅಧಿಕಾರಕ್ಕೆ ಬಂದ ವೇಳೆ ಮುಖ್ಯಮಂತ್ರಿಯಾಗುವ ಸಮರ್ಥರ ಬಗ್ಗೆ ಪದೇ ಪದೇ ಹೇಳಿಕೆ ನೀಡಿ ಗೊಂದಲ ಮೂಡಿಸಿದ್ದಾರೆ. ಹಲವು ಬಾರಿ ಎಚ್ಚರಿಕೆ ನೀಡಿದಾಗ್ಯೂ ಸೊಪ್ಪು ಹಾಕದೆ ಮುಂದಿನ ಮುಖ್ಯಮಂತ್ರಿ ಯಾರಾಗಬೇಕು ಎಂದು ಬಹಿರಂಗ ಹೇಳಿಕೆ ನೀಡಿ […]

ಆಕ್ರಮಣಕಾರಿ ಪ್ರಚಾರ ತಂತ್ರಕ್ಕೆ ಮೊರೆಹೋದ ಕಾಂಗ್ರೆಸ್

ಬೆಂಗಳೂರು,ಡಿ.4- ಚುನಾವಣೆ ಸಮೀಪಿಸುತ್ತಿರುವಂತೆ ಕಾಂಗ್ರೆಸ್ ಆಕ್ರಮಣಕಾರಿ ಪ್ರಚಾರ ಮಾರ್ಗಗಳ ಮೊರೆ ಹೋಗಿದ್ದು, ಬಿಜೆಪಿಯ ರೌಡಿ ರಾಜಕಾರಣಕ್ಕೆ ತಿರುಗೇಟು ನೀಡಲು ಪ್ರತ್ಯೇಕ ಬ್ಲಾಗ್ ಮಾದರಿಯ ಸಾಮಾಜಿಕ ಜಾಲತಾಣವನ್ನು ಪ್ರಾರಂಭಿಸಿದೆ. ಅದರಲ್ಲಿ ಇತ್ತೀಚೆಗೆ ಬಿಜೆಪಿ ಸೇರ್ಪಡೆಯಾದ ಕೆಲವು ವ್ಯಕ್ತಿಗಳ ಭಾವಚಿತ್ರಗಳಿದ್ದು, ಅವರು ಆರೋಪಿಗಳೆಂದು ಗುರುತಿಸಲಾದ ಕೊಲೆ ಹಾಗೂ ಇತರ ಪ್ರಕರಣಗಳ ಸಂಖ್ಯೆಯನ್ನು ನಮೂದಿಸಲಾಗಿದೆ. ಕಳೆದ ಬಾರಿ ಕಾಂಗ್ರೆಸ್‍ನ ಪೇಸಿಎಂ ಅಭಿಯಾನ ಭಾರೀ ಸಂಚಲನ ಮೂಡಿಸಿತ್ತು. ಬಿಜೆಪಿಗೆ ತೀವ್ರ ಮುಜಗರವನ್ನುಂಟು ಮಾಡಿದ್ದಲ್ಲದೆ ತನ್ನನ್ನು ತಾನು ಸಮರ್ಥಿಸಿಕೊಳ್ಳಲು ಪರದಾಡುವಂತಹ ಪರಿಸ್ಥಿತಿ ನಿರ್ಮಿಸಿತ್ತು. ಶ್ರೀರಂಗಪಟ್ಟಣದಲ್ಲಿ […]

‘ನೀವು ಗೆಲ್ಲಿ ಜತೆಗೊಬ್ಬರನ್ನು ಗೆಲ್ಲಿಸಿ’ : ಚುನಾವಣೆಗೆ ಬಿಜೆಪಿ ಹೊಸ ಕಾರ್ಯತಂತ್ರ

ಬೆಂಗಳೂರು,ಅ.18- ಬರಲಿರುವ ವಿಧಾನಸಭೆ ಚುನಾವಣೆಯಲ್ಲಿ ಹೊಸ ಹೊಸ ಕಾರ್ಯತಂತ್ರಗಳನ್ನು ರೂಪಿಸುತ್ತಿರುವ ಬಿಜೆಪಿ ಈ ಬಾರಿ ಪ್ರಭಾವಿ ನಾಯಕರಿಗೆ, ನೀವು ಗೆಲ್ಲಿ ಜೊತೆಗೊಬ್ಬರನ್ನು ಗೆಲ್ಲಿಸಿ ಎಂಬ ಟಾಸ್ಕ್ ನೀಡಲು ಮುಂದಾಗಿದೆ. ಸುಮಾರು 25ಕ್ಕೂ ಹೆಚ್ಚು ಪ್ರಭಾವಿ ನಾಯಕ ರನ್ನು ಗುರುತಿಸಿರುವ ಬಿಜೆಪಿ ವರಿಷ್ಠರು ತಾವು ಪ್ರತಿನಿಸುವ ಕ್ಷೇತ್ರದ ಜೊತೆಗೆ ಪಕ್ಕದ ಕ್ಷೇತ್ರದ ಅಭ್ಯರ್ಥಿಯನ್ನು ಗೆಲ್ಲಿಸಿಕೊಂಡು ಬರುವ ಹೊಣೆಗಾರಿಕೆಯನ್ನು ನೀಡಿದೆ. ಉತ್ತರಪ್ರದೇಶ, ಉತ್ತರಾಖಂಡ್, ಮಣಿಪುರ, ಗೋವಾ ಸೇರಿದಂತೆ ಮತ್ತಿತರ ರಾಜ್ಯಗಳಲ್ಲಿ ಈ ತಂತ್ರವನ್ನು ಅನುಸರಿಸಿದ್ದು, ಬಿಜೆಪಿಗೆ ವರವಾಗಿ ಪರಿಣಮಿಸಿತ್ತು. ಈಗ […]

ವಿಧಾನಸಭೆ ಚುನಾವಣೆಗೆ ಬಿಜೆಪಿಯ ಪ್ರಮುಖ ಅಸ್ತ್ರವಾಗಲಿದೆ ಮೀಸಲಾತಿ ಹೆಚ್ಚಳ

ಬೆಂಗಳೂರು,ಅ.15- ಬರಲಿರುವ ವಿಧಾನಸಭೆ ಚುನಾವಣೆಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಳ ಮಾಡಿರುವುದೇ ಬಿಜೆಪಿಯ ಪ್ರಮುಖ ಅಸ್ತ್ರವಾಗಲಿದೆ. ಕಾಂಗ್ರೆಸ್ ಅಧಿಕಾರಾವಧಿಯಲ್ಲಿ ದಲಿತರು, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ಸಮುದಾಯಕ್ಕೆ ಆಗಿರುವ ಅನ್ಯಾಯವನ್ನು ಜನತೆಯ ಮುಂದಿಟ್ಟು ಮತ ಸೆಳೆಯುವ ಲೆಕ್ಕಚಾರದಲ್ಲಿ ಕಮಲ ನಾಯಕರು ಇದ್ದಾರೆ. ಇದರ ಜತೆಗೆ ಹಿಂದುಳಿದವರು ಸೇರಿದಂತೆ ಸಣ್ಣ ಸಣ್ಣ ಸಮುದಾಯಗಳನ್ನು ತನ್ನತ್ತ ಸೆಳೆಯಲು ಮುಂದಾಗಿದೆ. ಇದರ ಮೊದಲ ಹಂತವಾಗಿ ಈಗಾಗಲೇ ದಲಿತರ ಮನೆಗಳಿಗೆ ಭೇಟಿ ನೀಡಿ ತಿಂಡಿ, ಭೋಜನ ಸ್ವೀಕರಿಸುವ ಮೂಲಕ […]

ಪಕ್ಷ ಬಲವರ್ಧನೆಗೆ ಬಿಜೆಪಿ ತಂತ್ರ, ಸಿಎಂ ರಾಜ್ಯ ಪ್ರವಾಸ

ಬೆಂಗಳೂರು,ಸೆ.16- ಅನಿವಾರ್ಯ ಕಾರಣಗಳಿಂದ ಮುಂದೂಡಲ್ಪಟ್ಟಿದ್ದ ಬಿಜೆಪಿ ಕಾರ್ಯಕಾರಿಣಿ ಸಭೆ 24ಕ್ಕೆ ಅರಮನೆ ಮೈದಾನದಲ್ಲಿ ನಡೆಯಲಿದೆ. ಈ ಹಿಂದೆ ಸೆ.11ರಂದು ಕಾರ್ಯಕಾರಿಣಿ ಸಭೆ ನಡೆಯಬೇಕಾಗಿತ್ತು. ದೊಡ್ಡಬಳ್ಳಾಪುರದಲ್ಲಿ ನಡೆದ ಜನ ಸ್ಪಂದನ ಕಾರ್ಯಕ್ರಮ ಹಾಗೂ ಅಧಿವೇಶನದ ಹಿನ್ನಲೆಯಲ್ಲಿ ಮುಂದೂಡಲಾಗಿತ್ತು. ಇದೀಗ 24ರಂದು ಕಾರ್ಯಕಾರಿಣಿ ಸಭೆ ನಡೆಯಲಿದ್ದು, ಜೆ.ಪಿ.ನಡ್ಡಾ, ಅಮಿತ್ ಷಾ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪಕ್ಷದ ರಾಜ್ಯಾಧ್ಯಕ್ಷ ನಳೀನ್‍ಕುಮಾರ್ ಕಟೀಲ್, ಕೇಂದ್ರ ಮತ್ತು ರಾಜ್ಯ ಸಚಿವರು, ಶಾಸಕರು, ಲೋಕಸಭೆ ಸದಸ್ಯರು, ವಿಧಾನಪರಿಷತ್ ಸದಸ್ಯರು ಸೇರಿದಂತೆ ಪದಾಧಿಕಾರಿಗಳು ಭಾಗಿಯಾಗಲಿದ್ದಾರೆ. ಬಹುನಿರೀಕ್ಷಿತ ಕಾರ್ಯಕಾರಿಣಿ […]