ಹೊಲದಲ್ಲಿ ನಾಲ್ಕು ಮುದ್ದಾದ ಹುಲಿ ಮರಿಗಳು ಪತ್ತೆ

ಹೈದರಾಬಾದ್.ಮಾ.9-ದಾರಿ ತಪ್ಪಿದ ನಾಲ್ಕು ಹುಲಿ ಮರಿಗಳನ್ನು ತಾಯಿ ಬಳಿ ಸೇರಿಸಲು ಆಂಧ್ರ ಅರಣ್ಯಾಧಿಕಾರಿಗಳು ಹುಡುಕಾಟ ಆರಂಭಿಸಿದ್ದಾರೆ. ಆಂಧ್ರಪ್ರದೇಶದ ನಂದ್ಯಾಲ-ಕರ್ನೂಲ್ ಪ್ರದೇಶ ಬಳಿಯ ಕೃಷಿ ಹೊಲದಲ್ಲಿ ನಾಲ್ಕು ಮುದ್ದಾದ ಹುಲಿ ಮರಿಗಳು ಪತ್ತೆಯಾಗಿವೆ. ಸಣ್ಣ ಹುಲಿ ಮರಿಗಳನ್ನು ಬೀದಿ ನಾಯಿಗಳಿಂದ ರಕ್ಷಿಸಲು ಅವರು ಮೊದಲು ಅವುಗಳನ್ನು ತಾತ್ಕಾಲಿಕ ಆಶ್ರಯಕ್ಕೆ ಸ್ಥಳಾಂತರಿಸಿ ನಂತರ ಪಶುವೈದ್ಯಕೀಯ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ. ಮರಿಗಳನ್ನು ಕಳೆದುಕೊಂಡಿರುವ ಹುಲಿ ಆಕ್ರಮಣಕಾರಿಯಾಗುವ ಸಾಧ್ಯತೆ ಇರುವುದರಿಂದ ಹುಲಿ ಮರಿಗಳನ್ನು ತಾಯಿ ಹುಲಿ ಬಳಿಗೆ ಸೇರಿಸಲು ಕಾರ್ಯಚರಣೆ ನಡೆಸಲಾಗುತ್ತಿದೆ ಎಂದು ಅರಣ್ಯಾಧಿಕಾರಿಗಳು […]
ಬೀದಿನಾಯಿಗಳ ರಕ್ಷಣೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ಹೊಸದಿಲ್ಲಿ, ನ.18 – ಬೀದಿನಾಯಿಗಳನ್ನು ಸಾಕುವುದು ಎಂದರೆ ಬೀದಿಗಿಳಿದು, ಹೋರಾಟ ಮಾಡಿ ಜನರ ಜೀವನದ ಮೇಲೆ ದುಷ್ಪರಿಣಾಮ ಬೀರುವುದು ಎಂದರ್ಥವಲ್ಲ ಎಂದು ಸವೋಚ್ಚ ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಸುಮಾರು 60ಕ್ಕೂ ಹೆಚ್ಚು ಬೀದಿನಾಯಿಗಳಿಗೆ ರಕ್ಷಣೆ ನೀಡುವಂತೆ ಮಹಿಳೆಯೊಬ್ಬರು ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಿರಸ್ಕರಿಸಿದೆ. ನ್ಯಾಯಮೂರ್ತಿಗಳಾದ ಎಂ ಆರ್ ಶಾ ಮತ್ತು ಎಂ ಎಂ ಸುಂದ್ರೇಶ್ ಅವರನ್ನೊಳಗೊಂಡ ಪೀಠವು ವಿಚಾರಣೆ ನಡೆಸುವಾಗ ಇದೇ ವಿಷಯದ ಕುರಿತು ಮತ್ತೊಂದು ಪೀಠವು ವಿಷಯವನ್ನು ಪರಿಗಣಿಸುತ್ತಿದೆ ಎಂದು ವರದಿಯಾಗಿರುವುದರಿಂದ ಪ್ರಸ್ತುತ ರಿಟ್ […]
ಬೀದಿ ನಾಯಿಗಳಿಗೆ ಆಹಾರ ನೀಡದಂತೆ ಹೈಕೋರ್ಟ್ ಆದೇಶ

ನಾಗ್ಪುರ, ಅ.21- ಬೀದಿ ನಾಯಿಗಳ ಹಾವಳಿ ಹೆಚ್ಚಾಗುತ್ತಿರುವ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಬಾಂಬೆ ಹೈಕೋರ್ಟ್ ಬೀದಿ ನಾಯಿಗಳಿಗೆ ಆಹಾರ ನೀಡದಂತೆ ಆದೇಶ ನೀಡಿದೆ. ಇತ್ತೀಚೆಗೆ ದಾರಿಹೋಕರ ಮೇಲೆ ಬೀದಿ ನಾಯಿಗಳ ಹಾವಳಿ ಹೆಚ್ಚಾಗುತ್ತಿರುವುದನ್ನು ನ್ಯಾಯಾಲಯ ಗಮನಿಸಿದ್ದು, ಈ ಹಿನ್ನೆಲೆಯಲ್ಲಿ ಇಂತಹ ಆದೇಶವನ್ನು ನೀಡಿದೆ. ಬೀದಿ ನಾಯಿಗಳ ವಿರುದ್ಧದ ಕಾರ್ಯಾಚರಣೆಗೆ ಅಡ್ಡಿಪಡಿಸುವವರ ವಿರುದ್ಧವೂ ಅಪರಾಧ ಪ್ರಕರಣಗಳನ್ನು ದಾಖಲಿಸುವಂತೆ ಹೈಕೋರ್ಟ್‍ನ ನಾಗ್ಪುರ ಪೀಠ ಸೂಚನೆ ನೀಡಿದೆ. ನ್ಯಾಯಮೂರ್ತಿಗಳಾದ ಸುನಿಲ್ ಸುಕ್ರೆ ಮತ್ತು ಅನಿಲ್ ಪನ್ಸಾರೆ ನೇತೃತ್ವದಲ್ಲಿ ಪ್ರಕರಣದ ವಿಚಾರಣೆ ನಡೆದಿದ್ದು, […]