ಪೊಲೀಸ್ ನೇಮಕಾತಿಯಲ್ಲಿ ಅಕ್ರಮಕ್ಕೆ ಅವಕಾಶವಿಲ್ಲ : ಸಿಎಂ

ಬೆಂಗಳೂರು,ಅ.21-ಪೊಲೀಸ್ ಇಲಾಖೆಯಲ್ಲಿ ಇನ್ನು ಮುಂದೆ ಯಾವುದೇ ಹಂತದ ನೇಮಕಾತಿಗಳು ನಡೆಯುವಾಗ ಅಕ್ರಮಗಳಿಗೆ ಅವಕಾಶ ಕೊಡದೆ ಪಾರದರ್ಶಕವಾಗಿ ಪ್ರಕ್ರಿಯೆಯನ್ನು ನಡೆಸ ಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಪೊಲೀಸ್ ಸಂಸ್ಮರಣಾ ದಿನಾಚರಣೆ ಅಂಗವಾಗಿ ಮೀಸಲು ಪಡೆದ ಕೇಂದ್ರ ಸ್ಥಾನದಲ್ಲಿ ಹುತಾತ್ಮರಾದ ಪೊಲೀಸರಿಗೆ ಪುಷ್ಪಗುಚ್ಛ ನಮನ ಸಲ್ಲಿಸಿ ನಂತರ ಮಾತನಾಡಿದ ಅವರು, ಯಾವುದೇ ನೇಮಕಾತಿಯಲ್ಲಿ ಭ್ರಷ್ಟಾಚಾರ ನಡೆಯದಂತೆ ತಡೆಯುವುದು ಸರ್ಕಾರ ಮತ್ತು ಇಲಾಖೆಗೆ ಬಹು ದೊಡ್ಡ ಸವಾಲಾಗಿದೆ. ನಮ್ಮ ಸರ್ಕಾರ ಬದ್ದತೆ ತೋರಿಸುತ್ತದೆ ಎಂದು ಅಭಯ […]

PFI ಪರ ಪ್ರತಿಭಟನೆ ನಡೆಸಿದರೆ ಕಠಿಣ ಕ್ರಮ : ಅರಗ ಜ್ಞಾನೇಂದ್ರ

ಬೆಂಗಳೂರು,ಸೆ.29- ಕೇಂದ್ರ ಸರ್ಕಾರ ಐದು ವರ್ಷಗಳ ಕಾಲ ನಿಷೇಧಿಸಿರುವ ಪಾಪುಲರ್ ಫ್ರಂಟ್ ಆಫ್ ಇಂಡಿಯಾ ಪರವಾಗಿ ಯಾರೇ ಧ್ವನಿ ಎತ್ತಿದರೂ ಅಂಥವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ನೇರ ಎಚ್ಚರಿಕೆ ಕೊಟ್ಟಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆಯಷ್ಟೇ ಕೇಂದ್ರ ಸರ್ಕಾರ ಪಿಎಫ್‍ಐ ಸೇರಿದಂತೆ ಅದರ 8 ಅಂಗಸಂಸ್ಥೆಗಳನ್ನು ಐದು ವರ್ಷಗಳ ಕಾಲ ನಿಷೇಧ ಮಾಡಿದೆ. ಒಂದು ವೇಳೆ ಈ ಸಂಘಟನೆ ಪರವಾಗಿ ಹೋರಾಟ ಪ್ರತಿಭಟನೆ ನಡೆಸಿದರೆ ಅಂಥವರ ಮೇಲೆ […]

ನೇಮಕಾತಿ ಅಕ್ರಮ : ರಾಜಸ್ಥಾನದ ಮಾದರಿ ಕಾನೂನು ರೂಪಿಸಲು ಒತ್ತಾಯ

ಬೆಂಗಳೂರು,ಸೆ.19- ನೇಮಕಾತಿ ಅಕ್ರಮಗಳಲ್ಲಿ ಭಾಗವಹಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ರಾಜಸ್ಥಾನದ ಮಾದರಿಯಲ್ಲಿ ಕಾನೂನು ರೂಪಿಸಬೇಕೆಂದು ಕರ್ನಾಟಕ ರಾಜ್ಯ ಸ್ಪರ್ಧಾತ್ಮಕ ಪರೀಕ್ಷೆಗಳ ಆಕಾಂಕ್ಷಿಗಳ ಸಂಘ ಒತ್ತಾಯಿಸಿದೆ. ನಗರದ ಫ್ರೀಡಂಪಾರ್ಕ್‍ನಲ್ಲಿ ಪ್ರತಿಭಟನೆ ನಡೆಸಿದ ಸಂಘದ ಪ್ರಮುಖರು, ಪದಾಧಿಕಾರಿಗಳು, 545 ಪಿಎಸ್‍ಐ ನೇಮಕಾತಿಯಲ್ಲಿ ಅಕ್ರಮ ನಡೆಸಿದವರ ವಿರುದ್ಧ ಶೀಘ್ರ ವಿಚಾರಣೆ ಪೂರ್ಣಗೊಳಿಸಿ ಕಠಿಣ ಕ್ರಮ ಕೈಗೊಳ್ಳಬೇಕು, ಈ ಹುದ್ದೆಗಳು ಮತ್ತು ಹೊಸದಾಗಿ ಅಧಿಸೂಚಿಸಲ್ಪಡುವ 402 ಹುದ್ದೆಗಳಿಗೆ ನೇಮಕಾತಿ ನಡೆಸಲು ಶೀಘ್ರವೇ ಪರೀಕ್ಷಾ ದಿನಾಂಕವನ್ನು ಪ್ರಕಟಿಸಬೇಕು ಎಂದು ಒತ್ತಾಯಿಸಿದ್ದಾರೆ. ಕೋವಿಡ್ ಕಾರಣದಿಂದಾಗಿ […]

ರಾಜ್ಯದಲ್ಲಿ ಮಂಕಿಪಾಕ್ಸ್ ಕುರಿತು ತೀವ್ರ ಕಟ್ಟೆಚ್ಚರ ವಹಿಸಲು ಮಾರ್ಗಸೂಚಿ ಪ್ರಕಟ

ಬೆಂಗಳೂರು,ಜು.23- ಕೇರಳದಲ್ಲಿ ಮೂರನೇ ಮಂಕಿಪಾಕ್ಸ್ ಪ್ರಕರಣ ಪತ್ತೆಯಾಗಿದ್ದು, ರಾಜ್ಯ ಆರೋಗ್ಯ ಇಲಾಖೆಯು ತೀವ್ರ ಕಟ್ಟೆಚ್ಚರ ಹಾಗೂ ಮಾರ್ಗಸೂಚಿ ಹೊರಡಿಸಲು ಮುಂದಾಗಿದೆ.ಮಂಕಿಪಾಕ್ಸ್ ಪತ್ತೆಯಾಗಿ ಅದು ಉಲ್ಭಣಗೊಂಡು ವೈದ್ಯಕೀಯ ಚಿಕಿತ್ಸೆ ಪಡೆಯಲು 5ರಿಂದ 13 ದಿನಗಳನ್ನು ತೆಗೆದುಕೊಳ್ಳುತ್ತದೆ. ಕೇವಲ ಸೋಂಕಿತ ವ್ಯಕ್ತಿಯ ಸಂಪರ್ಕದಿಂದ ಇದು ಹರಡುವುದಿಲ್ಲ ಎಂದು ತಜ್ಞರು ಹೇಳಿದ್ದಾರೆ. ಆದರೆ ಸೋಂಕಿತ ವ್ಯಕ್ತಿಯೊಂದಿಗೆ ದೀರ್ಘಕಾಲದ ನಿಕಟ ಮುಖಾಮುಖಿ ಸಂಪರ್ಕದಿಂದ, ಸಾಮಾನ್ಯವಾಗಿ ಸೋಂಕಿತ ವ್ಯಕ್ತಿಯ ಹತ್ತಿರ ಮೂರು ಗಂಟೆಗಳಿಗೂ ಕಾಲ 6 ಅಡಿ ಅಂತರದಲ್ಲಿದ್ದು, ವ್ಯಕ್ತಿ ಸುರಕ್ಷಿತಾ ಸಾಧನಗಳನ್ನು ಧರಿಸದಿದ್ದರೆ […]