ಸರ್ಕಾರವನ್ನು ನಿರಂತರವಾಗಿ ಕಾಡುತ್ತಿರುವ ಮೀಸಲಾತಿ ಹೋರಾಟಗಳು
ಬೆಂಗಳೂರು,ಆ.27- ರಾಜ್ಯ ಬಿಜೆಪಿ ಸರ್ಕಾರಕ್ಕೆ ಮೀಸಲಾತಿ ಹೋರಾಟಗಳು ಬೆಂಬಿಡದಂತೆ ಕಾಡುತ್ತಿವೆ. ಈಗ ಚುನಾವಣಾ ಸಮಯವಾಗಿರುವುದರಿಂದ ಈ ಹೋರಾಟಗಳು ಇನ್ನಷ್ಟು ತಲೆನೋವಾಗಿ ಪರಿಣಮಿಸಿ ಅಕ್ಷರಶಃ ಬಿಸಿತುಪ್ಪವಾಗಿ ಪರಿಣಮಿಸಿದೆ.ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಿದಂದಿನಿಂದ ಬೊಮ್ಮಾಯಿ ಬಂದರೂ ಹೋರಾಟದ ಕಿಚ್ಚು ಮಾತ್ರ ನಿಂತಿಲ್ಲ. ಇದು ಸಹಜವಾಗಿ ಬಿಜೆಪಿಗೆ ಮುಂದಿನ ಚುನಾವಣೆಯಲ್ಲಿ ಹಿನ್ನಡೆಯಾಗುವ ಆತಂಕ ಎದುರಾಗಿದೆ. ರಾಜ್ಯದಲ್ಲಿ ಮೂರು ಪ್ರಮುಖ ಮೀಸಲಾತಿ ಹೋರಾಟಗಳು ನಡೆಯುತ್ತಿವೆ. ಇದರ ಜೊತೆ ಇದೀಗ ಹೊಸದೊಂದು ಹೋರಾಟ ಸೇರಿಕೊಂಡಿದ್ದು ಒಟ್ಟು ನಾಲ್ಕು ಸಮುದಾಯಗಳು ಮೀಸಲಾತಿಗಾಗಿ ಬೀದಿಗಿಳಿದಿವೆ. ಪಂಚಮಸಾಲಿ, […]