ಬಡ್ತಿಯಲ್ಲಿ ಮೀಸಲಾತಿಗೆ ಅಳತೆಗೋಲಿಲ್ಲ : ಸುಪ್ರೀಂ

ನವದೆಹಲಿ,ಜ.28- ಸರ್ಕಾರಿ ಉದ್ಯೋಗದಲ್ಲಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಧಿಕಾರಿ, ಸಿಬ್ಬಂದಿಗಳಿಗೆ ಬಡ್ತಿಯಲ್ಲಿ ಮೀಸಲಾತಿ ನೀಡಲು ಅಳತೆಗೋಲನ್ನು ನಿಗದಿಪಡಿಸಲಾಗದು ಎಂದು ಸುಪ್ರೀಂಕೋರ್ಟ್ ಸ್ಪಷ್ಟ ಪಡಿಸಿರುವ ಸುಪ್ರೀಂಕೋರ್ಟ್, ದತ್ತಾಂಶಗಳ ಸಂಗ್ರಹದ ಹೊಣೆಗಾರಿಕೆ ರಾಜ್ಯ ಸರ್ಕಾರಗಳಿಗೆ ಸೇರಿದ್ದು ಎಂದು ತೀರ್ಪು ನೀಡಿದೆ. ಸರ್ಕಾರಿ ಹುದ್ದೆಗಳಲ್ಲಿ ಬಡ್ತಿ ಮೀಸಲಾತಿ ಸಂಬಂಧ ಇಂದು ಮಹತ್ವದ ತೀರ್ಪು ನೀಡಿರುವ ಸುಪ್ರೀಂಕೋರ್ಟ್, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಪ್ರಾತಿನಿಧ್ಯದಲ್ಲಿ ಅಸಮರ್ಪಕತೆಯನ್ನು ಕುರಿತ ಅಂಕಿ-ಅಂಶಗಳನ್ನು ಕಲೆ ಹಾಕುವುದು ರಾಜ್ಯ ಸರ್ಕಾರಗಳ ಬಾಧ್ಯತೆ ಎಂದಿದೆ. ನ್ಯಾಯಮೂರ್ತಿ […]