ಉಕ್ರೇನ್‍ನಲ್ಲಿ ಮೃತಪಟ್ಟ ನವೀನ್ ನಿವಾಸಕ್ಕೆ ಗಣ್ಯರ ಭೇಟಿ, ಕುಟುಂಬಕ್ಕೆ ಸಾಂತ್ವನ

ಹಾವೇರಿ,ಮಾ.2- ರಷ್ಯಾ ನಡೆಸಿದ ಕ್ಷಿಪಣಿ ದಾಳಿಗೆ ಉಕ್ರೇನ್‍ನ ಕಾರ್ಕೀವ್‍ನಲ್ಲಿ ನಿನ್ನೆ ಬಲಿಯಾದ ವೈದ್ಯಕೀಯ ವಿದ್ಯಾರ್ಥಿ ನವೀನ್ ಗ್ಯಾನಗೌಡರ್ ನಿವಾಸಕ್ಕೆ ಅನೇಕ ಗಣ್ಯರು ಆಗಮಿಸಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಬೆಂಗಳೂರು ವಲಯದ ಪಾಸ್‍ಪೋರ್ಟ್ ಅಧಿಕಾರಿ, ಹಾವೇರಿ ಜಿಲ್ಲಾಧಿಕಾರಿ ಸಂಜಯ್ ಶೆಟ್ಟಿ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಮುಖಂಡರು, ಮತ್ತಿತರರು ಆಗಮಿಸಿ ನವೀನ್ ಪೋಷಕರು ಹಾಗೂ ಸಂಬಂಧಿಕರನ್ನು ಭೇಟಿಯಾಗಿ ಸಾಂತ್ವನ ಹೇಳಿದ್ದಾರೆ. ಕರ್ಕೀವ್‍ನಲ್ಲಿರುವ ನವೀನ್ ಮೃತದೇಹವನ್ನು ಹುಟ್ಟೂರಿಗೆ ಕರೆತರಲು ರಾಜತಾಂತ್ರಿಕ ಪ್ರಯತ್ನಗಳು ಮುಂದುವರೆದಿದೆ. ಆದರೆ ಅಲ್ಲಿನ ಪರಿಸ್ಥಿತಿ ಕ್ಷಣ ಕ್ಷಣಕ್ಕೂ […]