ವಿದ್ಯಾರ್ಥಿಗಳಿಂದ ಶಾಲೆಯಲ್ಲೇ ನಮಾಜ್, ಸ್ಥಳೀಯರಿಂದ ವಿರೋಧ

ಮಂಗಳೂರು, ಫೆ.12- ಹಿಜಾಬ್ ಗದ್ದಲವೇ ಜ್ವಾಲಾಮುಖಿಯಾಗಿರುವಾಗ ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಯೊಂದರಲ್ಲಿ ನಮಾಜ್ ಮಾಡುತ್ತಿರುವ ವಿಡಿಯೋವೊಂದು ವೈರಲ್ ಆಗಿದ್ದು ಉರಿಯುವ ಬೆಂಕಿಗೆ ತುಪ್ಪ ಸುರಿದಂತಾಗಿದೆ.ದಕ್ಷಿಣ ಕನ್ನಡ ಜಿಲ್ಲೆಯ ಕಡಬಾ ತಾಲ್ಲೂಕಿನ ಅಂಕತಡಕದ ಸರ್ಕಾರಿ ಪ್ರಾಥಮಿಕ ಶಾಲೆಯ ತರಗತಿ ಕೊಠಡಿಯಲ್ಲಿ ವಿದ್ಯಾರ್ಥಿಗಳು ನಮಾಜ್ ಮಾಡಿದ್ದಾರೆ ಎಂದು ಹೇಳಲಾಗಿದೆ. ಫೆಬ್ರವರಿ 4ರ ಘಟನೆಯ ಈ ವಿಡಿಯೋ ವೈರಲ್ ಆಗಿದೆ. ಸ್ಥಳೀಯರು ನಮಾಜ್‍ಗೆ ವಿರೋಧ ವ್ಯಕ್ತ ಪಡಿಸಿದ್ದರಿಂದ ವಿವಾದ ಸೃಷ್ಟಿಯಾಗಿದೆ. ದೂರು ಆಧರಿಸಿ ಶಿಕ್ಷಣ ಇಲಾಖೆ ಅಧಿಕಾರಿಗಳು ನಿನ್ನೆ ಸ್ಥಳಕ್ಕೆ ಭೇಟಿ […]