ಸಚಿವರು-ಮಾಜಿ ಸಚಿವರ ಆರೋಪ : ವಿಧಾನ ಪರಿಷತ್ ನಲ್ಲಿ ಕೋಲಾಹಲ
ಬೆಂಗಳೂರು,ಸೆ.20- ಕಡತ ವಿಲೇವಾರಿಗೆ ಅಧಿಕಾರಿಗಳು ವಿಳಂಬ ಮಾಡುತ್ತಿದ್ದಾರೆ ಎಂದು ಸರ್ಕಾರದ ಹಾಲಿ ಸಚಿವರು, ಮಾಜಿ ಸಚಿವರು ಮಾಡಿದ ಆರೋಪ ವಿಧಾನ ಪರಿಷತ್ ನಲ್ಲಿ ಕೋಲಾಹಲದ ವಾತಾವರಣ ನಿರ್ಮಿಸಿತು. ಪ್ರಶ್ನೋತ್ತರದಲ್ಲಿ ಸದಸ್ಯ ಸುನೀಲ್ ವಲ್ಯಾಪುರ್ ಅವರು ಸಕ್ಕರೆ ಕಾರ್ಖಾನೆಗಳಿಗೆ ಎಥೆನಾಲ್ ಉತ್ಪಾದಿಸಲು ಅವಕಾಶ ಮಾಡಿಕೊಡಬೇಕು ಎಂದು ಮನವಿ ಮಾಡಿದರು. ಅದಕ್ಕೆ ಉತ್ತರ ನೀಡಿದ ಸಕ್ಕರೆ ಸಚಿವ ಶಂಕರ ಪಾಟೀಲ ಮುನೇನಕೊಪ್ಪ, ಕಲ್ಯಾಣ ಕರ್ನಾಟಕ ಭಾಗದಲ್ಲಿ ಸರ್ಕಾರಿ ವಲಯದ ಯಾವುದೇ ಸಕ್ಕರೆ ಕಾರ್ಖಾನೆಗಳು ಇಲ್ಲ. 3 ಸಹಕಾರಿ, 10 ಖಾಸಗಿ […]