“ರ‍್ಯಾಗಿಂಗ್ ಮಾಡಿದವರು ಸೈಫ್ ಆಗಿರಲಿ ಸತೀಶ್ ಆಗಿರಲಿ ಬೀಡಲ್ಲ”

ಹೈದರಾಬಾದ್,ಫೆ.28- ರ‍್ಯಾಗಿಂಗ್ ಮಾಡಿ ವಿದ್ಯಾರ್ಥಿನಿ ಸಾವಿಗೆ ಕಾರಣರಾದವರು ಸೈಫ್ ಆಗಿರಲಿ ಸತೀಶ್ ಆಗಿರಲಿ ಅವರನ್ನು ಸಮ್ಮನೆ ಬಿಡುವುದಿಲ್ಲ ಎಂದು ತೆಲಂಗಾಣ ಸಚಿವ ಕೆ.ಟಿ.ರಾಮರಾವ್ ಭರವಸೆ ನೀಡಿದ್ದಾರೆ. ಹೈದ್ರಾಬಾದ್‍ನ ಕಾಕತೀಯ ಮೆಡಿಕಲ್ ಕಾಲೇಜಿನಲ್ಲಿ ಪ್ರಥಮ ವರ್ಷದ ಸ್ನಾತಕೋತ್ತರ ವೈದ್ಯಕೀಯ ವ್ಯಾಸಂಗ ಮಾಡುತ್ತಿದ್ದ ಪ್ರೀತಿ ಎಂಬ ಯುವತಿ ರ‍್ಯಾಗಿಂಗ್‍ನಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರು ಮಾತನಾಡುತ್ತಿದ್ದರು. ಸುಪ್ರೀಂ ಕೋರ್ಟ್ ಕದ ತಟ್ಟಿದ ಸಿಸೋಡಿಯಾ ಹಿರಿಯ ವಿದ್ಯಾರ್ಥಿಗಳ ಕೀಟಲೆಯಿಂದ ಮನನೊಂದಿದ್ದ ಪ್ರೀತಿ ಚುಚ್ಚುಮದ್ದು ಚುಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಆಕೆಯ […]
ಲಿಂಬಾವಳಿ ವಿರುದ್ಧ ಕಾನೂನು ಪ್ರಕಾರ ತನಿಖೆ : ಸಿಎಂ ಬೊಮ್ಮಾಯಿ

ಬೆಂಗಳೂರು,ಜ.2- ಡೆತ್‍ನೋಟ್ ಬರೆದು ಉದ್ಯಮಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಅರವಿಂದ ಲಿಂಬಾವಳಿ ವಿರುದ್ಧ ಕಾನೂನು ಪ್ರಕಾರವೇ ತನಿಖೆ ನಡೆಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೃತರ ಪತ್ನಿ ನೀಡಿದ ದೂರಿನನ್ವಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಹಲವರ ವಿರುದ್ದ ಎಫ್‍ಐಆರ್ ಹಾಕಿದ್ದಾರೆ. ಕಾನೂನು ಪ್ರಕಾರವೇ ತನಿಖೆ ನಡೆಯುವುದರಿಂದ ಸರ್ಕಾರ ಮಧ್ಯಪ್ರವೇಶ ಮಾಡುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು. ದೇಶದ ಕಾನೂನು ಎಲ್ಲರಿಗೂ ಒಂದೇ. ನಿಷ್ಪಕ್ಷಪಾತದ ತನಿಖೆ ನಡೆಯಲಿದ್ದು, ಇದರಲ್ಲಿ […]
ಈಶ್ವರಪ್ಪ ತಲೆದಂಡಕ್ಕೆ ಕಾರಣವಾಗಿದ್ದ ಸಂತೋಷ್ ಆತ್ಮಹತ್ಯೆ ಪ್ರಕರಣ ರಾಜಭವನ ಅಂಗಳದಲ್ಲಿ
ಬೆಂಗಳೂರು,ಜು.15- ರಾಜ್ಯ ರಾಜಕಾರಣದಲ್ಲಿ ಭಾರೀ ವಿವಾದ ಸೃಷ್ಟಿಸಿ ಸಚಿವ ಈಶ್ವರಪ್ಪನವರ ತಲೆದಂಡಕ್ಕೂ ಕಾರಣವಾಗಿದ್ದ ಬೆಳಗಾವಿ ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣ ಇದೀಗ ರಾಜಭವನ ಅಂಗಳಕ್ಕೆ ಕಾಲಿಟ್ಟಿದೆ. ಪ್ರಕರಣ ಕುರಿತಂತೆ ಪೊಲೀಸರಿಂದ ಸರಿಯಾದ ತನಿಖೆ ನಡೆಯುತ್ತಿಲ್ಲ ಎಂದು ಆರೋಪಿ ಸಂತೋಷ್ ಪತ್ನಿ, ರಾಜ್ಯಪಾಲ ತಾವರ್ ಚಂದ್ ಗೆಲ್ಹೋಟ್‍ಗೆ ಪತ್ರ ಬರೆದಿದ್ದು, ನಿಷ್ಪಕ್ಷ ಹಾಗೂ ಪಾರದರ್ಶಕ ತನಿಖೆ ನಡೆಸಬೇಕೆಂದು ಕೋರಿದ್ದಾರೆ. ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಅವರ ನಿರ್ದೇಶನದಂತೆ ತನಿಖೆ ನಡೆಯುತ್ತಿದೆ. ಕೇವಲ 15 ದಿನದಲ್ಲಿ […]