ಹಿಮಾಚಲ ಗೆದ್ದ ಕಾಂಗ್ರೆಸ್ : ಸಿಎಂ ಆಯ್ಕೆ ಗೊಂದಲದ ನಡುವೆ ಆಪರೇಷನ್ ಭಯ

ಶಿಮ್ಲಾ,ಡಿ.9-ಹಿಮಾಚಲ ಪ್ರದೇಶದಲ್ಲಿ ಭರ್ಜರಿ ಬಹುಮತದೊಂದಿಗೆ ಗೆಲುವು ಸಾಧಿಸಿರುವ ಕಾಂಗ್ರೆಸ್ ಪಕ್ಷ ಮುಖ್ಯಮಂತ್ರಿ ಆಯ್ಕೆ ವಿಷಯದಲ್ಲಿ ಗೊಂದಲಕ್ಕೊಳಗಾಗಿದ್ದು, ಮತ್ತೊಂದೆಡೆ ಬಿಜೆಪಿಯ ಆಪರೇಷನ್ ಕಮಲದ ಭಯದಿಂದ ನಿದ್ದೆಗೆಡುವಂತಾಗಿದೆ. ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಹುದ್ದೆಯ ಮೇಲೆ ಪ್ರಮುಖ ನಾಲ್ವರು ನಾಯಕರು ಕಣ್ಣಿಟ್ಟಿದ್ದು , ಸರ್ವಸಮ್ಮತ ಅಭ್ಯರ್ಥಿಯ ಆಯ್ಕೆ ಸವಾಲನ್ನು ಸೃಷ್ಟಿಸಿದೆ. ಇಂದು ಸಂಜೆ ಶಿಮ್ಲಾದ ಖಾಸಗಿ ಹೋಟೆಲ್‍ನಲ್ಲಿ ಕಾಂಗ್ರೆಸ್ ಪಕ್ಷದ ಮಹತ್ವದ ಸಭೆ ನಡೆಯಲಿದೆ. ರಾಜ್ಯ ಉಸ್ತುವಾರಿ ನೋಡಿಕೊಳ್ಳುತ್ತಿರುವ ಎಐಸಿಸಿ ಪ್ರಧಾನಕಾರ್ಯದರ್ಶಿ ರಾಜೀವ್ ಶುಕ್ಲ, ಛತ್ತೀಸ್‍ಗಢದ ಮುಖ್ಯಮಂತ್ರಿ ಭೂಪೇಶ್ ಬಗೇಲ್, ಹಿರಿಯ […]