ಬಿಜೆಪಿ ಸೇರಿದ ಸುಮಲತಾ ಅಂಬರೀಶ್ ಅವರ ಆಪ್ತ ಸಚ್ಚಿದಾನಂದ ಮೂರ್ತಿ

ಬೆಂಗಳೂರು,ನ.28-ಹಳೇ ಮೈಸೂರು ಭಾಗದಲ್ಲಿ ಪಕ್ಷವನ್ನು ಬಲಪಡಿಸಿ ಅಧಿಕಾರದ ಗದ್ದುಗೆ ಹಿಡಿಯಲು ರಣತಂತ್ರ ರೂಪಿಸಿರುವ ಬಿಜೆಪಿ, ಸಂಸದೆ ಸುಮಲತಾ ಅಂಬರೀಶ್ ಅವರ ಆಪ್ತ ಸಚ್ಚಿದಾನಂದ ಮೂರ್ತಿ ಅವರನ್ನು ಪಕ್ಷಕ್ಕೆ ಸೆಳೆದುಕೊಂಡಿದೆ. ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಮಂಡ್ಯ ಜಿಲ್ಲೆ ಸಂಸದೆ ಸುಮಲತಾ ಅಂಬರೀಶ್ ಅವರ ಬಲಗೈ ಬಂಟ ಎಂದು ಗುರುತಿಸಿಕೊಂಡಿದ್ದ ಸಚ್ಚಿದಾನಂದ ಅವರನ್ನು ಪಕ್ಷದ ಮುಖಂಡರು ಶಾಲು ಹೊದಿಸಿ ಪಕ್ಷದ ಧ್ವಜ ನೀಡಿ ಆತ್ಮೀಯವಾಗಿ ಬರಮಾಡಿಕೊಂಡರು. ಸಚಿವರಾದ ನಾರಾಯಣ ಗೌಡ, ಕೆ.ಗೋಪಾಲಯ್ಯ, ಡಾ.ಸಿ.ಎನ್.ಅಶ್ವಥ್ ನಾರಾಯಣ, ಬಿಜೆಪಿ […]