ರಾಷ್ಟ್ರೀಯ ಪಕ್ಷಗಳ ಪ್ರಮುಖ ಹುದ್ದೆಗಳಲ್ಲಿ ರಾರಾಜಿಸುತ್ತಿರುವ ಕನ್ನಡಿಗರು

ದಕ್ಷಿಣ ಭಾರತೀಯರನ್ನು ಮದ್ರಾಸಿ ಎಂದು ಕರೆಯುವ ಮೂಲಕ ಕಾಲೆಳೆಯುವ ಪ್ರಯತ್ನ ನಡೆಯುತ್ತಲೇ ಇದೆ. ಈ ನಡುವೆ ರಾಷ್ಟ್ರ ರಾಜಕಾರಣದಲ್ಲಿ ಪ್ರಮುಖ ಹುದ್ದೆಗಳನ್ನು ಕನ್ನಡಿಗರು ಅಲಂಕರಿಸಿ ತಮ್ಮ ಪ್ರೌಢಿಮೆ ಮೆರೆದಿರುವುದು ಇದೆ.ಈಗ ಐತಿಹಾಸಿಕ ಹಿನ್ನೆಲೆಯುಳ್ಳ ಕಾಂಗ್ರೆಸ್‍ನ ರಾಷ್ಟ್ರೀಯ ಅಧ್ಯಕ್ಷರು ಚುನಾಯಿತರಾಗುವ ಸನ್ನಿಹದಲ್ಲಿ ಮತ್ತೊಂದು ಮೈಲಿಗಲ್ಲು ಸೃಷ್ಟಿಯಾಗುತ್ತಿದೆ. ಚಲನಚಿತ್ರ ರಂಗದಲ್ಲಿ ಪ್ಯಾನ್ ಇಂಡಿಯಾ ದಾಟಿ, ಜಾಗತಿಕವಾಗಿ ಸದ್ದು ಮಾಡಿದ ಸಿನಿಮಾಗಳನ್ನು ನಿರ್ಮಿಸಿ, ನಿರ್ದೇಶಿಸಿ ಹಾಟ್ ಹಿಂದಿ ಪ್ರದೇಶವನ್ನು ಕಣ್ಣರಳಿಸುವಂತೆ ಮಾಡಿದ ದಕ್ಷಿಣ ಭಾರತೀಯರು, ಈಗ ರಾಜಕಾರಣದಲ್ಲೂ ತಮ್ಮ ಛಾಪು ಮೂಡಿಸುತ್ತಿದ್ದಾರೆ. […]