ಜ.31ಕ್ಕೆ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಲೋಕಾರ್ಪಣೆ

ಬೆಂಗಳೂರು, ಜ.11- ಬಡವರಿಗೆ, ಸಾಮಾನ್ಯ ವರ್ಗದ ಜನರಿಗೆ ಎಲ್ಲ ರೀತಿಯ ವೈದ್ಯಕೀಯ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ಹೈಟೆಕ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯನ್ನು ನಿರ್ಮಾಣ ಮಾಡಲಾಗಿದ್ದು, ಜ.31ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಲೋಕಾರ್ಪಣೆ ಮಾಡಲಿದ್ದು, ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಕೂಡ ಭಾಗಿಯಾಗಲಿದ್ದಾರೆ ಎಂದು ವಸತಿ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ. ಕಳೆದ 1988ರಲ್ಲಿ ಇದೇ ಸ್ಥಳದಲ್ಲಿ ರೆಫರಲ್ ಆಸ್ಪತ್ರೆಯನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಆದಿಚುಂಚನಗಿರಿ ಶ್ರೀಗಳಾದ ಬಾಲಗಂಗಾಧರನಾಥ ಸ್ವಾಮೀಜಿ ಅವರು ದೊಡ್ಡ ಆಸ್ಪತ್ರೆಯನ್ನು […]