ನಾಳೆಯಿಂದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ

ಬೆಂಗಳೂರು,ಆ.11- ದ್ವಿತೀಯ ಪಿಯುಸಿಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆಯು ನಾಳೆಯಿಂದ ಆ.25ರವರೆಗೆ ಪೂರಕ ಪರೀಕ್ಷೆಯನ್ನು ನಡೆಸಲಿದೆ. ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು, ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ನಡೆಯುವ ದಿನಾಂಕಗಳಲ್ಲಿ ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಉಚಿತ ಬಸ್ ಸೌಲಭ್ಯವನ್ನು ಕೆಎಸ್ಆರ್‌ಟಿಸಿ ಕಲ್ಪಿಸಲಿದೆ. ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ತೆರಳುವಾಗ ಮತ್ತು ಹಿಂದಿರುವಾಗ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಪ್ರವೇಶ ಪತ್ರವನ್ನು ತೋರಿಸಿ, […]